Karnataka Weather report: ಕರಾವಳಿಯಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: (Karnataka Weather report) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ಇಂದು ಮತ್ತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದ್ದು, ಕರಾವಳಿಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯಾದ್ಯಂತ ಕಳೆದೆರಡು ದಿನಗಳಿಂದ ಮಳೆ (Karnataka Weather report) ಕೊಂಚ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಮೈಸೂರು, ಕೊಡಗು ಸೇರಿದಂತೆ ಅನೇಕ ಕಡೆ ವಿಪರೀತ ಚಳಿಯ ಜೊತೆಗೆ ತುಂತುರು ಮಳೆಯೂ ಆಗುತ್ತಿದೆ. ಕರ್ನಾಟಕ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ಅಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಮೈಸೂರಿನಲ್ಲಿ ಇಂದಿನಿಂದ ಡಿ. 4ರವರೆಗೂ ಮಳೆಯಾಗಲಿದ್ದು, ಚಳಿಯ ವಾತಾವರಣವೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಒಂದು ವಾರದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು, ಚೆನ್ನೈ, ಪುದುಚೇರಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಉತ್ತರ ಒಳನಾಡಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಬೆಳಗ್ಗೆ ಚಳಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : PFI Ban Petition Dismissed: ಪಿಎಫ್‌ಐ ಬ್ಯಾನ್‌ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ: ಏಕಸದಸ್ಯ ಪೀಠದಿಂದ ಮಹತ್ವದ ತೀರ್ಪು

ಇದನ್ನೂ ಓದಿ : Karnataka Farmer : ಕರ್ನಾಟಕದ ರೈತ 205 ಕೆಜಿ ಈರುಳ್ಳಿಯನ್ನು ಕೇವಲ 8.36 ರೂ.ಗೆ ಮಾರಾಟ ಮಾಡಿದ ರಸೀದಿ ಫೋಟೋ ವೈರಲ್

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಸೇರಿದಂತೆ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದ್ದು, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಕೂಡ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 3 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದ್ದು, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಮಳೆಯ ಜೊತೆಗೆ ಹಿಮಪಾತವಾಗುವ ನಿರೀಕ್ಷೆ ಕೂಡ ಇದದು, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(Karnataka Weather report) In the wake of depression in the Bay of Bengal, rain is forecast again in various parts of the state today, and there is a possibility of thundershowers in the coastal parts, according to the Meteorological Department.

Comments are closed.