Karnataka weather report: ಕರಾವಳಿಯಲ್ಲಿ ಡಿ. 16ರ ವರೆಗೆ ಮಳೆ: 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: (Karnataka weather report) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಇಂದು ಕೂಡ ಅಕಾಲಿಕ ಮಳೆ ಮುಂದುವರಿಯಲಿದ್ದು, ಕರಾವಳಿಯಲ್ಲಿ ಡಿ.16 ರ ವರೆಗೂ ಮಳೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ (Karnataka weather report) ಹೆಚ್ಚಿದ್ದು, ಕರ್ನಾಟಕದ ಕೆಲವು ಕಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಚಳಿಯ ವಾತಾವರಣವಿದ್ದು, ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆ ಮುಂದುವರಿಯಲಿದೆ.

ಮ್ಯಾಂಡಸ್‌ ಚಂಡಮಾರುತದ ಹಿನ್ನಲೆಯಲ್ಲಿ ಕಳೆದ ಎರಡು ದಿನಗಳಿಂದ ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿದಿದ್ದು, ಇಂದು ಕೂಡ ಚಾಮರಾಜನಗರ, ಕೊಡಗು ಮತ್ತು ಶಿವಮೊಗ್ಗದಲ್ಲಿ ಮಳೆ ಸುರಿಯಲಿದ್ದು, ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ಹಾವೇರಿ, ಗದಗ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಮತ್ತು ತುಮಕೂರು, ಹಾಸನ ಮತ್ತು ದಾವಣಗೆರೆಯ ಕೆಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ : BBMP master plan: 9 ಮಾಲ್‌ ನಿಂದ 50 ಕೋಟಿ ತೆರಿಗೆ ವಂಚನೆ: ಟ್ಯಾಕ್ಸ್ ವಸೂಲಿಗೆ ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್

ಇದನ್ನೂ ಓದಿ : Cyclone Effect: ಗೈಡ್ ಲೈನ್ಸ್ ಹೊರಡಿಸಿದ ರಾಜ್ಯ ಸರ್ಕಾರ

ಇದನ್ನೂ ಓದಿ : Mandous Cyclone Effect : ಮಾಂಡೌಸ್ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಚಳಿಗಾಳಿ, ಎಚ್ಷರಿಕೆ ಕೊಟ್ಟ ಆರೋಗ್ಯ‌ ಸಚಿವ

ಇದನ್ನೂ ಓದಿ : Karnataka weather report: ಚಳಿಗೆ ಕರ್ನಾಟಕ ತತ್ತರ : ಡಿಸೆಂಬರ್ 16ರ ವರೆಗೆ ಮಳೆ ಮುಂದುವರಿಕೆ, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಇಂದು ಲಕ್ಷದ್ವೀಪದ ಅಲ್ಲಲ್ಲಿ ತುಂತುರು ಮಳೆಯಾಗಲಿದ್ದು, ನಿಕೋಬಾರ್‌ ದ್ವೀಪದಲ್ಲಿ ತುಂತುರು ಮಳೆಯ ಜೊತೆಗೆ ಗುಡುಗು ಸಹಿತ ಮಳೆಯಾಗಲಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಗುಜರಾತ್‌, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಅರುಣಾಚಲ ಪ್ರದೇಶದಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(Karnataka weather report) Widespread rains have been pouring in the state for the past few days in the backdrop of a depression in the Bay of Bengal. Unseasonal rain will continue today as well and rain will continue till December 16 on the coast. Thunderstorms are likely to occur in Bengaluru today and thundershowers will continue across the state, the Meteorological Department said.

Comments are closed.