Karnataka Weather Report : ಕರಾವಳಿಯಲ್ಲಿ ಮತ್ತೆ ಆರ್ಭಟಿಸಲಿದೆ ಮಳೆ : ಮುಂದಿನ 5 ದಿನ ಆರೆಂಜ್ ಅಲರ್ಟ್

ಬೆಂಗಳೂರು : ರಾಜ್ಯದ ಕರಾವಳಿ ಹೆಚ್ಚಿನ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಸಂಜೆ ತನಕ ಮೋಡ ಮುಸುಕಿದ (Karnataka Weather Report) ವಾತಾವರಣದಿಂದ ಕೂಡಿದ್ದು, ರಾತ್ರಿ ವೇಳೆ ಬಿರುಗಾಳಿಯೊಂದಿಗೆ ಜೋರಾಗಿ ಮಳೆ ಸುರಿದಿದೆ. ಇನ್ನು ರಾಜ್ಯದ ಹಲವೆಡೆ ವರುಣಾಬ್ಬರದ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಒಳನಾಡಿನಲ್ಲಿ ಜೋರಾದ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗಾಳಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಹಾಗೂ ಉತ್ತರ ಕನ್ನಡ ಒಳನಾಡಿಗೆ ಆರೆಂಜ್‌ ಅಲರ್ಟ್‌, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಸಮುದ್ರ ತೀರದಲ್ಲಿ ವಾಸಿಸುವ ಸ್ಥಳೀಯರು, ಪ್ರವಾಸಿಗರು ಹಾಗೂ ಮೀನುಗಾರರು ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : Malpe Beach : ಮೀನುಗಾರಿಕಾ ಬೋಟ್ ಮುಳುಗಡೆ : ನಾಲ್ವರು ಮೀನುಗಾರರ ರಕ್ಷಣೆ

ಇದನ್ನೂ ಓದಿ : Maravante Beach : ಮರವಂತೆ ಬೀಚ್‌ನಲ್ಲಿ ಯುವಕ ನೀರುಪಾಲು : ಪ್ರವಾಸಿಗರ ನಿರ್ಲಕ್ಷ್ಯಕ್ಕೆ ಬೀಳುತ್ತಿಲ್ಲ ಬ್ರೇಕ್‌

ದಕ್ಷಿಣ ಒಳನಾಡಿಗೆ ಇಂದಿನಿಂದ ಮುಂದಿನ 5 ದಿನ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲ್ಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಮಳೆ ಎನ್ನುವುದು ಕರಾವಳಿ ಭಾಗದಲ್ಲಿ ಹೆಚ್ಚಾಗಿ ಸುರಿಯುವುದರಿಂದ ರೈತರಿಗೆ ಮೊಗದಲ್ಲಿ ಸಂತಸ ತಂದಿದೆ. ಸದ್ಯ ಕರಾವಳಿ ಜಿಲ್ಲೆಗಳಲ್ಲಿ ಬಿತ್ತಿದ ಬೀಜ ಮೊಳಕೆಯೊಡೆದು, ನಾಟಿ ನಡೆದಯುತ್ತಿದ್ದು, ಮಳೆ ಅನುಕೂಲಕರವಾಗಿ ಸುರಿಯುತ್ತಿರುವುದು ರೈತರ ಪಾಲಿಗೆ ಸಂತಸ ಮೂಡಿಸಿದೆ.

Karnataka Weather Report : Rain will hit the coast again : Orange Alert for the next 5 days

Comments are closed.