Karnataka weather report today: ರಾಜ್ಯದಲ್ಲಿ ನ. 27ರ ವರೆಗೆ ಬಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: (Karnataka weather report today) ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊಂಚ ಕಡಿಮೆಯಾಗಿದ್ದ ಮಳೆಯ ವಾತಾವರಣ ಇದೀಗ ಮತ್ತೆ ಆರಂಭವಾಗಿದೆ.ಕರ್ನಾಟಕದ ಇಪ್ಪತ್ತೈದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್‌ 27ರವೆರೆಗೆ ಮಳೆ ಮುಂದುವರಿಯುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ (Karnataka weather report today) ಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ, ಮಲೆನಾಡು ಹಾಗೂ ಉತ್ತರ ಕನ್ನಡದ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಕೊಡಗು, ಮತ್ತು ಹಾಸನದ ಗುಡ್ಡಗಾಡು ಪ್ರದೇಶಗಳಲ್ಲಿ ಕೂಡ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಭಾಗದ ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಹಾಗೂ ಉತ್ತರ ರಾಜ್ಯದ ವಿಜಯಪುರ, ಧಾರವಾಡ, ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಇಂದು ಕೂಡ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆ ಕೂಡ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಜಿಟಿ ಜಿಟಿ ಮಳೆಯಾಗಿದೆ. ರಾಜ್ಯದ ಇಪ್ಪತ್ತೈದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್‌ 27 ರ ವೆರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : Karnataka Weather today: ಭೀಕರ ಚಳಿಯ ನಡುವಲ್ಲೇ ಕರ್ನಾಟಕದಲ್ಲಿ 3 ದಿನ ಬಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಇದನ್ನೂ ಓದಿ : ಧರ್ಮಸ್ಥಳ ಬಳಿ ಭೀಕರ ರಸ್ತೆ ಅಪಘಾತ : ಓರ್ವ ಸಾವು, 7 ಮಂದಿ ಗಂಭೀರ

ಇನ್ನೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(Karnataka weather report today) The rainy weather which was a little less in the state for the past few days has started again. The Indian Meteorological Department has forecast that rain will continue till November 27 in more than twenty five districts of Karnataka.

Comments are closed.