Karnataka Weather Report : ಹವಾಮಾನ ವರದಿ : ಆಗಸ್ಟ್‌ 16ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು : ಕಳೆದ ಎರಡು ವಾರದಿಂದ ಕಣ್ಮರೆಯಾಗಿದ್ದ ಮಳೆರಾಯ, ಈ ವಾರದ ಆರಂಭದಿಂದ ಕರಾವಳಿ ಜಿಲ್ಲೆಗಳಲ್ಲಿ (Karnataka Weather Report) ಮಳೆ ಚುರುಕುಗೊಂಡಿದೆ. ಹವಾಮಾನ ಇಲಾಖೆ ವರದಿ ಪ್ರಕಾರ, ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಹಲವಡೆ ಆಗಸ್ಟ್‌ 16ರವರೆಗೂ ಮಳೆಯಾಗಲಿದೆ.

ರಾಜ್ಯದ ಕರಾವಳಿ ಹಲವು ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ, ಒಳನಾಡಿನ ಕೆಲವಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಒಂಡೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ಬೀಡುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರು, ಪ್ರವಾಸಿಗರು ಹಾಗೂ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : Crime News : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಿಲ್ಲಿ ಮೋಡ ಚದುರಿದಂತೆ ಉತ್ತಮ ಮಳೆಯಾಗಲಿದೆ. ಆಗಸ್ಟ್‌ 9 ರಂದು ಬೆಳಗ್ಗೆಯಿಂದ ಸಂಜೆಯವರೆಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕೊಪ್ಪದಲ್ಲಿ 43.5 ಮಿಮೀ ಮಳೆಯಾಗಲಿದ್ದು, ರಾಜ್ಯದಲ್ಲಿ ಹೆಚ್ಚು ಮಳೆಯಾಗುವ ಪ್ರದೇಶ ಇದಾಗಿದೆ.

Karnataka Weather Report: Weather Report: Heavy rain in coastal districts till August 16

Comments are closed.