ಉಳ್ಳಾಲ : ಕರಾವಳಿಯಲ್ಲಿ ಕಿಡಿಗೇಡಿಗಳು ದುಷ್ಕೃತ್ಯ ಮೆರೆದಿದ್ದಾರೆ. ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದೆ.
ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಆಡಳಿತ ಸಮಿತಿಯವರು ಹುಂಡಿಯನ್ನು ತೆರೆಯುವ ಸಂದರ್ಭ ಕಾಣಿಕೆ ಡಬ್ಬದಲ್ಲಿ ಕಾಂಡೋಮ್ ಪತ್ತೆಯಾಗಿದೆ.
ಮಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಕೊರಗಜ್ಜನ ದೈವಸ್ಥಾನದಲ್ಲಿ ಇಂತಹ ಪ್ರಕರಣಗಳು ನಡೆದಿತ್ತು. ಇದರ ಬೆನ್ನಲ್ಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಓರ್ವ ಸಾವನ್ನಪ್ಪಿದ್ದ. ಇದೀಗ ಮತ್ತೆ ಇಂತಹದ್ದೇ ಕೃತ್ಯ ನಡೆದಿದೆ.
ಈ ಕುರಿತು ಭಕ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಉಳ್ಳಾಲ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.