ಕೋಟ : ಕಾಂಗ್ರೆಸ್‌ ಸೇರಿದ ಸಮಾಜ ಸೇವಕ ನಾಗೇಂದ್ರ ಪುತ್ರನ್‌

ಕೋಟ : ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಕೋಟ ಪರಿಸರದಲ್ಲಿ ಜನಪ್ರಿಯತೆ ಪಡೆದಿದ್ದ ಕೋಟ ನಾಗೇಂದ್ರ ಪುತ್ರನ್‌ (Kota Nagendra Putran) ಅವರು ಭಾನುವಾರ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ದಿನೇಶ್‌ ಹೆಗ್ಡೆ ಮೊಳಹಳ್ಳಿ ಅವರ ಸಮ್ಮುಖದಲ್ಲಿ ಸಾಲಿಗ್ರಾಮದಲ್ಲಿರುವ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಸೇರ್ಪಡೆ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್‌ ಕೋಟ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಂಕರ್‌ ಕುಂದರ್‌, ಕೋಟತಟ್ಟು ಗ್ರಾಮೀನ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸುರೇಶ ಕೆಚ್ಚೆಕೆರೆ ಹಾಗೂ ಪಕ್ಷದ ಇತರ ಪ್ರಮುಖರು ಹಾಜರಿದ್ದರು.

ಈ ಹಿಂದೆ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದ ನಾಗೇಂದ್ರ ಪುತ್ರನ್‌, ಗೋವಿಗಾಗಿ ಮೇವು ಸಂಘಟನೆಯ ಚಿಕ್ಕಮಗಳೂರು ಜಿಲ್ಲಾ ಉಸ್ತವಾರಿಯಾಗಿದ್ದಾರೆ. ಕರ್ನಾಟಕ ವಿದ್ಯಾರ್ಥಿ ಪರಿಷತ್ತಿನ ಮಾಜಿ ಉಪಾಧ್ಯಕ್ಷ ಮಾತ್ರವಲ್ಲ ಲಕ್ಷ್ಮೀ ಸೋಮ ಬಂಗೇರ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಜಯಪ್ರಕಾಶ್‌ ಹೆಗ್ಡೆ ಬಣದಲ್ಲಿ ಗುರುತಿಸಿಕೊಂಡಿದ್ದ ನಾಗೇಂದ್ರ ಪುತ್ರನ್‌ ಅವರು ಮೊಳಹಳ್ಳಿ ದಿನೇಶ್‌ ಹೆಗ್ಡೆ ಅವರ ಕಾರ್ಯವೈಖರಿಯನ್ನು ಮೆಚ್ಚಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಬೈಂದೂರು : ಕೊಸಳ್ಳಿ ಫಾಲ್ಸ್‌ ನಲ್ಲಿ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಇದನ್ನೂ ಓದಿ : ಬಿಜೆಪಿ ಜೊತೆ ಎಐಎಡಿಎಂಕೆ ಮೈತ್ರಿ : ಬಿಎಸ್ವೈ ಭೇಟಿ ಮಾಡಿದ ತಮಿಳು ನಾಯಕರು

ಈ ಸಂದರ್ಭದಲ್ಲಿ ಮಾತನಾಡಿದ ನಾಗೇಂದ್ರ ಪುತ್ರನ್‌, ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದೆ. ಜಯಪ್ರಕಾಶ್‌ ಹೆಗ್ಡೆ ಅವರ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದಾಗ ಬಿಜೆಪಿಯಲ್ಲೂ ಗುರುತಿಸಿಕೊಂಡಿದ್ದೆ. ಆದರೆ ಅಧಿಕಾರ ಸಿಕ್ಕ ನಂತರ ಕಾರ್ಯಕರ್ತರನ್ನು ಮರೆಯುವ ಬಿಜೆಪಿಯ ನಿಲುವಿನಿಂದ ಬೇಸರವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೇರಬೇಕಾಯಿತು,” ಎಂದು ಹೇಳಿದ್ದಾರೆ.

ಇದನ್ನೂ ಓದಿ : BJP Candidates List : ಬಿಜೆಪಿಯಲ್ಲಿ ಅಂತಿಮ ಹಂತಕ್ಕೆ ಟಿಕೇಟ್ ಸರ್ಕಸ್: ದೆಹಲಿ ತಲುಪಿದ ಪಟ್ಟಿ ಹಾಗೂ ಅಭ್ಯರ್ಥಿಗಳು

ಇದನ್ನೂ ಓದಿ : Bandipur Narendra Modi Visit : ಏ. 9ಕ್ಕೆ ಬಂಡೀಪುರಕ್ಕೆ ಮೋದಿ ಭೇಟಿ: ಇಂದಿನಿಂದ 4 ದಿನ ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ, ರೆಸಾರ್ಟ್ ವಾಸ್ತವ್ಯ ಬಂದ್

Kota Nagendra Putran: Kota: Nagendra Putran is a social worker who belongs to Congress

Comments are closed.