ರಾಜ್ಯದ ವಸತಿ ಶಾಲೆಯಗಳಲ್ಲಿ ಪಿಯುಸಿ ವರೆಗೆ ಶಿಕ್ಷಣ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: (Kota Srinivasa Pujari) ರಾಜ್ಯದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಸ್ತುತ 6 ನೇ ತರಗತಿಯಿಂದ 10 ನೇ ತರಗತಿಯವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕಳತ್ತೂರು ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಮತ್ತು ಗ್ರಾಮ ಪಂಚಾಯತ್‌ ಕುತ್ಯರು ಇವರ ಸಹಯೋಗದೊಂದಿಗೆ 25 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಅವರು ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ವಸತಿ ಶಾಲೆಗಳಲ್ಲಿ ಪಿಯುಸಿ ವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದ್ದು, ಇದರಿಂದ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ರಾಜ್ಯದ 40,000 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ರಾಜ್ಯದಲ್ಲಿ 830 ಕ್ಕೂ ಹೆಚ್ಚು ಉಚಿತ ವಸತಿ ಶಾಲೆಗಳಿದ್ದು, ಇದರಲ್ಲಿ 2.5 ಲಕ್ಷಕ್ಕೂ ಅಧಿಕ ವಿದ್ಯರ್ಥಿಗಳಿಗೆ ಉಚಿತ ಊಟ, ಸಮವಸ್ತ್ರ, ವಸತಿ ಸೇರಿದಂತೆ ಎಲ್ಲಾ ಸೌಲಭ್ಯಗಳೊಂದಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಈ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ ಬಾರಿ ಶೇ.99 ಪಲಿತಾಂಶ ದಾಖಲಾಗಿದೆ. ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 530 ವಸತಿ ಶಾಲೆಗಳಲ್ಲಿ ಪಿಯುಸಿ ವರೆಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದರು.

ಇದನ್ನೂ ಓದಿ : RTE application: ಪೋಷಕರಿಗೆ ಮಹತ್ವದ ಮಾಹಿತಿ: ಆರ್‌ಟಿಇ ಸೀಟಿಗಾಗಿ ಅರ್ಜಿ ಸಲ್ಲಿಕೆ ಅರಂಭ: ಇಲ್ಲಿದೆ ಪೂರ್ಣ ಮಾಹಿತಿ

ಇದನ್ನೂ ಓದಿ : KEA conducts KCET exam: ಕೆ-ಸೆಟ್‌ ಪರೀಕ್ಷೆಗಳನ್ನ ವಿಶ್ವವಿದ್ಯಾಲಯಗಳು ಮಾಡುವ ನಿರ್ಧಾರವನ್ನು ಕೈಬಿಟ್ಟ ಸರಕಾರ

ಇದನ್ನೂ ಓದಿ : ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ನಿರ್ದೇಶಕರ ವಿರುದ್ದ ನ್ಯಾಯಾಂಗ ನಿಂದನೆ: ಜೈಲು ಶಿಕ್ಷೆಯ ಎಚ್ಚರಿಕೆ ನೀಡಿದ ಹೈಕೋರ್ಟ್

Kota Srinivasa Pujari: Education upto PUC in State Residential Schools : Kota Srinivasa Pujari

Comments are closed.