ಕೃಷ್ಣ ಜನ್ಮಾಷ್ಟಮಿಗೆ ಸಜ್ಜಾಗುತ್ತಿದೆ ಕೃಷ್ಣನನಗರಿ : ವಿಟ್ಲಪಿಂಡಿಗೆ ಭಕ್ತರಿಗಿಲ್ಲ ರಥಬೀದಿ ಪ್ರವೇಶ : ಡಿಸಿ

0

ಉಡುಪಿ : ಕೃಷ್ಣನಗರಿ ಉಡುಪಿ ಕೃಷ್ಣಜನ್ಮಾಷ್ಟಮಿಗೆ ಸಜ್ಜಾಗುತ್ತಿದೆ. ಸೆಪ್ಟೆಂಬರ್ 10 ಮತ್ತು 11ರಂದು ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿಯ ಕಾರ್ಯಕ್ರಮಕ್ಕಾಗಿ ಶ್ರೀ ಕೃಷ್ಣಮಠದಲ್ಲಿ ಸಿದ್ದತೆಗಳು ನಡೆಯುತ್ತಿದೆ.

ಆದ್ರೆ ಈ ಬಾರಿ ಮೊಸರು ಕುಡಿಕೆ ಕಾರ್ಯಕ್ರಮ ಗಳಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶ ನೀಡದಿರಲು ಉಡುಪಿ ಜಿಲ್ಲಾಡಳಿತ ನಿರ್ಧರಿಸಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆಯ ಆಚರಣೆ ಕೇವಲ ಸಾಂಪ್ರದಾಯಿಕವಾಗಿ ಮಾತ್ರವೇ ನಡೆಯಲಿದೆ. ಮಠಕ್ಕೆ ಸಂಬಂಧಿಸಿದವರು ಮಾತ್ರವೇ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ರಥಬೀದಿ ಪ್ರವೇಶಕ್ಕೆ ಅವಕಾಶವನ್ನು ನಿರಾಕರಿಸಲಾಗಿದ್ದು, ಮಠ ಹಾಗೂ ರಥಬೀದಿಯ ಸಂಪರ್ಕದ ಎಲ್ಲಾ ರಸ್ತೆಗಳನ್ನು ಮುಚ್ಚಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಅನ್ ಲಾಕ್ 4.0 ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆದರೆ ನೂತನ ಮಾರ್ಗಸೂಚಿ ಸಪ್ಟೆಂಬರ್ 21ರಿಂದ ಜಾರಿಗೆ ಬರಲಿದೆ. ಪ್ರಸ್ತುತ ಮಾರ್ಗಸೂಚಿಯಲ್ಲಿ ಕೇವಲ 50 ಮಂದಿಗೆ ಮಾತ್ರವೇ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸಾಂಪ್ರದಾಯಿಕವಾಗಿ ಆಚರಣೆ ನಡೆಸಲು ಪರ್ಯಾಯ ಅದಮಾರು ಮಠದ ಸ್ವಾಮೀಜಿ ಅವರಿಗೆ ತಿಳಿಸಲಾಗಿದ್ದು, ಪರ್ಯಾಯ ಸ್ವಾಮೀಜಿಯವರು ಕೂಡ ಒಪ್ಪಿಗೆಯನ್ನು ಸೂಚಿಸಿದ್ದಾರೆ ಎಂದರು.

Leave A Reply

Your email address will not be published.