KSRTC BUS ACCIDENT : ಉಡುಪಿಯಲ್ಲಿ ಭೀಕರ ಅಪಘಾತ : ಎಎಸ್ಐ ಹಾಗೂ ಮಗಳು ಸಾವು

ಉಡುಪಿ : ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ( KSRTC BUS ACCIDENT )ನಡುವೆ ನಡುವೆ ನಡೆದ ಭೀಕರ ಅಪಘಾತದಲ್ಲಿ ಎಎಸ್‌ಐ ಹಾಗೂ ಅವರ ಮಗಳು ಸಾವನ್ನಪ್ಪಿರುವ ದುರಂತ ಘಟನೆ ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿ ನಡೆದಿದೆ.

ಕರಾವಳಿ ಕಾವಲು ಪಡೆಯ ಎಎಸ್‌ಐ ಗಣೇಶ್‌ ಪೈ ( 58 ವರ್ಷ) ಹಾಗೂ ಮಗಳು ಗಾಯತ್ರಿ ಪೈ (27 ವರ್ಷ) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬಂದಿದ್ದ ಮಗಳನ್ನು ಮನೆಗೆ ಕರೆದುಕೊಂಡು ಹೋಗುವ ಸಾಲುವಾಗಿ ಗಣೇಶ್‌ ಪೈ ಅವರು ತನ್ನ ಬೈಕಿನಲ್ಲಿ ಸಂತೆಕಟ್ಟೆ ಬಸ್‌ ನಿಲ್ಡಾಣಕ್ಕೆ ಬಂದಿದ್ದಾರೆ. ಈ ವೇಳೆಯಲ್ಲಿ ಮಗಳನ್ನು ಬೈಕಿನಲ್ಲಿ ಕೂರಿಸಿಕೊಂಡು ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ಕೇರಳದಿಂದ ಕೊಲ್ಲೂರಿಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ (ಕೇರಳ ರಸ್ತೆ ಸಾರಿಗೆ ಸಂಸ್ಥೆ) ಬಸ್‌ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಣೇಶ್‌ ಪೈ ಹಾಗೂ ಗಾಯತ್ರಿ ಪೈ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್‌ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಎಎಸ್‌ಐ ಗಣೇಶ್‌ ಪೈ ಅವರು ಕರಾವಳಿ ಕಾವಲು ಪಡೆಯಲ್ಲಿ ಕಳೆದ ಹಲವು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದಾರೆ. ಉಡುಪಿಯಿಂದ ಕುಂದಾಪುರ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಕುರಿತು ಸಾರ್ವಜನಿಕರು ಸಾಕಷ್ಟು ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಟೋಲ್‌ ರಸ್ತೆಯಲ್ಲಿ ವಾಹನಗಳು ವೇಗವಾಗಿ ಚಲಿಸುತ್ತಿದ್ದು, ಸಂತೆಕಟ್ಟೆಯಲ್ಲಿ ಅವೈಜ್ಞಾನಿಕವಾಗಿ ಡಿವೈಡರ್‌ ನೀಡಿರುವುದೇ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿ : ದುಬಾರಿ ಡೊನೇಷನ್ ಹಾಗೂ ಮೀಸಲಾತಿ ವ್ಯವಸ್ಥೆ ಇನ್ನಾದರೂ ಬದಲಾಗಲಿ : ನವೀನ್ ತಂದೆ ಆಕ್ರೋಶ

ಇದನ್ನೂ ಓದಿ : ಬ್ರಹ್ಮಾವರದ ದೇವಸ್ಥಾನದಲ್ಲಿ ಕಳವಿಗೆ ಯತ್ನ, ಕಳ್ಳರು ಪರಾರಿ

( KSRTC Bus Accident ASI and Daughter Death Santhekatte near Udupi )

Comments are closed.