Katte Gopalakrishna : ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಬೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕುಂದಾಪುರ : ಖ್ಯಾತ ಉದ್ಯಮಿ, ಕುಂದಾಪುರದ ಚಿನ್ಮಯಿ ಆಸ್ಪತ್ರೆಯ (kudapura Chinmayi Hospital ) ಮಾಲೀಕ ಕಟ್ಟೆ ಬೋಜಣ್ಣ ( ಗೋಪಾಲಕೃಷ್ಣ) ( Katte Gopalakrishna) ಅವರು ರಿವಾಲ್ವಾರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಕುದುರೆಬೆಟ್ಟಿನಲ್ಲಿರುವ ಮೊಳಹಳ್ಳಿ ಗಣೇಶ್‌ ಶೆಟ್ಟಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಕಟ್ಟೆ ಗೋಪಾಲಕೃಷ್ಣ ( ಭೋಜಣ್ಣ) ಅವರು ಕುಂದಾಪುರದಲ್ಲಿ ಚಿನ್ಮಯಿ ಆಸ್ಪತ್ರೆಯನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಜನರಿಗೆ ಆರೋಗ್ಯ ಸೇವೆಯನ್ನು ನೀಡುವ ಕಾರ್ಯವನ್ನು ಮಾಡಿದ್ದರು. ಉಡುಪಿ ಜಿಲ್ಲೆಯ ಪ್ರಖ್ಯಾತ ಆಸ್ಪತ್ರೆಗಳಲ್ಲಿ ಒಂದಾಗಿದೆ. ಮಾತ್ರವಲ್ಲ ಬಹುಕೋಟಿ ಉದ್ಯಮಿಯಾಗಿರುವ ಕಟ್ಟೆ ಬೋಜಣ್ಣ ಬೆಂಗಳೂರಿನಲ್ಲಿ ಹೋಟೆಲ್‌, ಬಟ್ಟೆ ಉದ್ಯಮದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದ್ರೆ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಮೊಗವೀರ ಸಮುದಾಯದ ಮುಖಂಡರಾಗಿರುವ ಕಟ್ಟೆ ಗೋಪಾಲಕೃಷ್ಣ ( ಭೋಜಣ್ಣ) ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹು ಪ್ರಖ್ಯಾತಿಯನ್ನು ಪಡೆದುಕೊಂಡಿರುವ ಭೋಜಣ್ಣ ಭೂ ವ್ಯವಹಾರವನ್ನು ನಡೆಸುತ್ತಿದ್ದು, ಆರ್ಥಿಕ ಸಂಕಷ್ಟ ಆತ್ಮಹತ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗುತ್ತಿದೆ. ಈ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಬೇರೆಯವರ ಮನೆಯ ಸಿಟೌಟ್‌ನಲ್ಲಿ ಯಾಕೆ ಆತ್ಮಹತ್ಯೆ ಮಾಡಿಕೊಂಡ್ರು ಅನ್ನೋ ಕುರಿತು ಚರ್ಚೆ ನಡೆಯುತ್ತಿದೆ. ಜೊತೆಗೆ ಸಾರ್ವಜನಿಕರು ಕೂಡ ಈ ಕುರಿತು ಅನುಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ : ಇಂಗ್ಲಿಷ್​ ಓದಲು ಬರುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ 7ನೇ ತರಗತಿ ಬಾಲಕ

ಇದನ್ನೂ ಓದಿ : ಕುಂದಾಪುರ ಶಿಲ್ಪಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ : ಸಾವಿನ ಹಿಂದೆ ಲವ್‌ ಜಿಹಾದ್‌ ಆರೋಪ

kudapura Chinmayi Hospital Owner Katte Gopalakrishna Commits Suicide Gun Shoot

Comments are closed.