ರಾಜ್ಯದ ಅತ್ಯಂತ ಶ್ರೀಮಂತ ದೇಗುಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ವಾರ್ಷಿಕ ಆದಾಯ 127 ಕೋಟಿ

ಕಡಬ : (Kukke Subrahmanya Temple) ಸರ್ಪದೋಷ ಪರಿಹಾರಕ್ಕೆ ಹೆಚ್ಚು ಹೆಸರುವಾಸಿಯಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ದರ್ಶನ ಮಾಡುತ್ತಾರೆ. 5,000 ವರ್ಷಕ್ಕೂ ಹೆಚ್ಚು ವರ್ಷ ಇತಿಹಾಸ ಹೊಂದಿರುವ ಹಾಗೂ ದಕ್ಷಿಣ ಭಾರತದಲ್ಲೇ ಅತೀ ಹೆಚ್ಚು ಪ್ರಸಿದ್ದಿ ಪಡೆದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಇದೀಗ ರಾಜ್ಯದ ಹಾಗೂ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚಿನ ದಾಖಲೆ ಪ್ರಮಾಣದಲ್ಲಿ ಆದಾಯ ಗಳಿಸಿದೆ.

ಈಗಷ್ಟೇ ಆರ್ಥಿಕ ವರ್ಷ ಮುಗಿದಿದ್ದು, ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಸಂಗ್ರಹವಾದ ಆದಾಯ ಸೇರಿಸಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಕುಕ್ಕೆ ಕ್ಷೇತ್ರಕ್ಕೆ 123 ಕೋಟಿ ರೂ. ಗಳಿಕೆಯಾಗಿದೆ. 2022ರ ಎಪ್ರಿಲ್‌ನಿಂದ 2023 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ 123,64,49,480.47 ರೂ. ಆದಾಯ ಗಳಿಸಿರುವ ಏಕೈಕ ಕ್ಷೇತ್ರ ಇದಾಗಿದೆ.

ಇನ್ನು 123,64,49,480.47 ರೂ. ಆದಾಯ ಗಳಿಸಿದ್ದು ಈ ಬಾರಿಯೂ ರಾಜ್ಯದಲ್ಲಿ ಮೊದಲ ಸ್ಥಾನಪಡೆಯುವ ನಿರೀಕ್ಷೆ ಇದೆ. ಈ ಹಿಂದೆ 2006-07ನೇ ಸಾಲಿನಲ್ಲಿ ದೇವಸ್ಥಾನದ ಆದಾಯ 19,76 ಕೋಟಿ ರೂ. ಆಗಿತ್ತು. 2007- 08ರಲ್ಲಿ 24.44 ಕೋಟಿ ರೂ. ಗಳಿಗೆ ಏರಿತ್ತು. 2008-09ರಲ್ಲಿ 31 ಕೋಟಿ ರೂ., 2009-10ರಲ್ಲಿ 38.51 ಕೋಟಿ, 2011-12ರಲ್ಲಿ 56.24 ಕೋಟಿ, 2012-13ರಲ್ಲಿ 66.76 ಕೋಟಿ, 2013-14ರಲ್ಲಿ 68 ಕೋಟಿ, 2014-15ರಲ್ಲಿ 77 ಕೋಟಿ, 2015-16ರಲ್ಲಿ 88 ಕೋಟಿ, 2016-17ರಲ್ಲಿ 91.69 ಕೋಟಿ, 2017-18ರಲ್ಲಿ 95.92 ಕೋಟಿ, 2018-19ರಲ್ಲಿ 92,09 ಕೋಟಿ, 2019-20ರಲ್ಲಿ 98.92 ಕೋಟಿ, 2020-21ರಲ್ಲಿ 68.94 ಕೋಟಿ, 2021-22ರಲ್ಲಿ 12.73 ಕೋಟಿ ಆದಾಯ ಬಂದಿತ್ತು.

ಇದನ್ನೂ ಓದಿ : Solar eclipse 2023: ಏಪ್ರಿಲ್ 20ರಂದು ವರ್ಷದ ಮೊದಲ ಸೂರ್ಯಗ್ರಹಣ

2021-22ನೇ ಆರ್ಥಿಕ ವರ್ಷದಲ್ಲಿ ದೇವಸ್ಥಾನವು 12,73,23,758.07 ರೂ. ಆದಾಯ ಗಳಿಸುವ ಮೂಲಕ ಕೊರೊನಾ ಹೊಡೆತಕ್ಕೆ ಸಿಲುಕಿತ್ತು. ಭಕ್ತರ ಪ್ರವೇಶಕ್ಕೆ ನಿರ್ಬಂಧವಿದ್ದ ಕಾರಣ 2019ರಿಂದ 22ರ ವರೆಗೆ ಆದಾಯ ಇಳಿಮುಖವಾಗಿತ್ತು. ಕೊರೊನಾದಿಂದ ಭಕ್ತರಿಲ್ಲದೆ ಕಡಿಮೆಯಾಗಿದ್ದ ಆದಾಯ ಈಗ ಏಕಾಏಕಿ ದಾಖಲೆಯ ಪ್ರಮಾಣಕ್ಕೆ ಏರಿಕೆಯಾಗಿದೆ. ಈ ಮೂಲಕ ಸತತ ರಾಜ್ಯದ ನಂಬರ್ ಒನ್ ಆದಾಯ ಗಳಿಕೆಯ ದೇವಸ್ಥಾನಗಳ ಪಟ್ಟಿಯಲ್ಲಿ ಕುಕ್ಕೆ ಹೆಸರು ಮಾಡಿದೆ.

Kukke Subrahmanya Temple: The richest temple in the state is Kukke Subrahmanya Temple, with an annual income of 127 crores.

Comments are closed.