ಕುಂದಾಪುರ : ಕ್ವಾರಂಟೈನ್ ನಿಯಮ ಉಲ್ಲಂಘನೆ, ಸೋಂಕಿತನ ವಿರುದ್ದ ಕ್ರಿಮಿನಲ್ ಕೇಸ್..!!

ಕುಂದಾಪುರ : ಕೊರೊನಾ ಸೋಂಕು ದೃಢಪಟ್ಟು ಹೋಮ್ ಐಸೋಲೇಷನ್ ನಲ್ಲಿದ್ದ ವ್ಯಕ್ತಿಯೋರ್ವ ಕ್ವಾರಂಟೈನ್ ನಿಯಮ ಪಾಲನೆ ಮಾಡದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತನ ವಿರುದ್ದ ಕ್ರಿಮಿನಲ್ ಕೇಸ್ ದಾಖಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಾವಡಿ ಗ್ರಾಮದ ವ್ಯಕ್ತಿಯೋರ್ವ ಹೋಮ್ ಐಸೋಲೇಷನ್ ನಲ್ಲಿದ್ದರು ಕೂಡ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹೊರಗಡೆ ತಿರುಗಾಡುತ್ತಿದ್ದ. ಕುಂದಾಪುರ ಸಹಾಯಕ ಆಯುಕ್ತರು ಗ್ರಾಮಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತರು ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು ಮಾಡುವಂತೆ ಸೂಚನೆಯನ್ನು ನೀಡಿದ್ದರು.

https://kannada.newsnext.live/home-sealed-down-of-corona-infected-bold-decision-of-udupi-district-collector/

ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯ ವಿರುದ್ದ ಇದೀಗ ಕಾವ್ರಾಡಿ ಗ್ರಾಮ ಪಂಚಾಯತ್ ಪಿಡಿಓ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Comments are closed.