ಕುಂದಾಪುರ : ಗುಡುಗು, ಆಲಿಕಲ್ಲು ಸಹಿತ ಭಾರೀ ಮಳೆ

ಕುಂದಾಪುರ :  ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ಅದ್ರಲ್ಲೂ ಕುಂದಾಪುರ ಹಾಗೂ ಬೈಂದೂರು ತಾಲೂಕಿನ‌ ಕೆಲವೆಡೆ ಆಲಿಕಲ್ಲು ಸಹಿತ ಮಳೆ ಸುರಿದ ಬಗ್ಗೆ ವರದಿಯಾಗಿದೆ.

ಉಡುಪಿ ಜಿಲ್ಲೆಯ ಸಿದ್ಧಾಪುರ, ಹೊಸಂಗಡಿ, ಯಡಮೊಗೆ, ಹಳ್ಳಿಹೊಳೆ, ಅಜ್ರಿ, ಅಂಪಾರು, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಬೆಳ್ವೆ, ಮಡಾಮಕ್ಕಿ, ಹೆಂಗವಳ್ಳಿ, ಅಮಾಸೆಬೈಲು, ಉಳ್ಳೂರು ಪರಿಸರದಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಜೋರಾಗಿ ಗಾಳಿ ಬೀಸಿದ್ದು ಗುಡುಗು ಮಿಂಚು ಸಹಿತ ಭಾರಿ ಮಳೆಯಾದ ಪರಿಣಾಮ ಹಲವು ಕಡೆಗಳಲ್ಲಿ ಮರಗಳು ಉರುಳಿ ಬಿದ್ದು, ಹಾನಿಯುಂಟಾಗಿದ್ದರೆ, ವಿದ್ಯುತ್ ಕಂಬಗಳು ತುಂಡಾಗಿ ಬಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

Comments are closed.