Kurmarao M: ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ : (Kurmarao M) ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಹರಡುವಿಕೆ, ಅವುಗಳ ಲಕ್ಷಣಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಆಗಿಂದಾಗ್ಗೆ ಅರಿವು ಮೂಡಿಸಿದ್ದಲ್ಲಿ ಮಾತ್ರ ಜನರು ರೋಗಗಳಿಂದ ದೂರ ಉಳಿಸಲು ಸಾಧ್ಯ. ಈ ಬಗ್ಗೆ ಆರೋಗ್ಯ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಭೆಗಳ ಅಧ್ಯಕ್ಷತೆ (Kurmarao M) ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ರೋಗ ರುಜಿನಗಳು ಹವಾಮಾನಕ್ಕೆ ಅನುಗುಣವಾಗಿ ಹರಡುತ್ತವೆ. ಇವುಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ವತಿಯಿಂದ ವರ್ಷದ ಮೊದಲನೇ ಮಾಸದಿಂದ ಕೊನೆಯ ಮಾಸದವರೆಗೆ ಮುನ್ನೆಚ್ಚರಿಕೆ ಕ್ರಮಗಳು ಸೇರಿದಂತೆ ಮತ್ತಿತರ ಕಾರ್ಯಗಳನ್ನು ಕೈಗೊಳ್ಳಲು ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಿದ್ದಲ್ಲಿ ಸಮಾಜವು ಆರೋಗ್ಯಯುಕ್ತವಾಗಿ ಇರಲು ಸಾಧ್ಯ ಎಂದರು.
ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಕಡಿತಕ್ಕೊಳಗಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇವುಗಳ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್ಗಳು, ಆರೋಗ್ಯ ಇಲಾಖೆ ಹಾಗೂ ಪಶು ಸಂಗೋಪನಾ ಇಲಾಖೆಯವರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ನಿಯಂತ್ರಿಸಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಈಗಾಗಲೇ ಉಡುಪಿ ತಾಲೂಕಿನ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವಾಗಿ ಘೋಷಿಸಲಾಗಿದೆ. ಇದರಿಂದ ಅಲ್ಲಿನ ಸ್ಥಳೀಯ ಜನರಿಗೆ ಆಗಿರುವ ಲಾಭಗಳನ್ನು ಇತರೆ ಗ್ರಾಮದವರಿಗೆ ತಿಳಿಸಿ, ಅವರುಗಳು ತಂಬಾಕು ಉತ್ಪನ್ನಗಳಿಂದ ದೂರ ಇರುವ ಹಾಗೆ ಉತ್ತೇಜಿಸುವ ಕೆಲಸವಾಗಬೇಕೆಂದ ಅವರು, ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮವನ್ನು ಸಹ ತಂಬಾಕು ಮುಕ್ತವನ್ನಾಗಿ ಘೋಷಿಸಲು ಇರುವ ಎಲ್ಲಾ ಅರ್ಹತೆಗಳನ್ನು ಹೊಂದಿದೆ. ಸರಕಾರದ ಮಾನದಂಡದನ್ವಯ ಇದ್ದಲ್ಲಿ ಈ ಗ್ರಾಮವನ್ನೂ ತಂಬಾಕು ಮುಕ್ತ ಗ್ರಾಮವನ್ನಾಗಿಸಬೇಕು ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಮಾಡುವುದನ್ನು ಶೇ.100 ರಷ್ಟು ನಿಯಂತ್ರಿಸಲು ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದ ಅವರು, ತಂಬಾಕು ಉತ್ಪನ್ನಗಳಿಂದ ದೂರವಿದ್ದಲ್ಲಿ ದೇಹಾರೋಗ್ಯವು ಮಾರಕ ರೋಗಗಳಿಂದ ದೂರ ಉಳಿಯಲು ಸಾಧ್ಯ ಎಂದು ಯುವಜನರಲ್ಲಿ ಮನದಟ್ಟು ಮಾಡಬೇಕು ಎಂದರು.

ಇದನ್ನೂ ಓದಿ : New Year celebration: ಹೊಸ ವರ್ಷದ ಮೋಜು ಮಸ್ತಿಗೆ ಬ್ರೇಕ್‌: ವಿಶ್ವ ಹಿಂದೂ ಪರಿಷತ್‌ ಆಗ್ರಹ

ಇದನ್ನೂ ಓದಿ : Silver Spirit cruise ship: ನವಮಂಗಳೂರು ಬಂದರಿಗೆ ಬಂದ ʻಸಿಲ್ವರ್‌ ಸ್ಪಿರಿಟ್‌ʼ ಕ್ರೂಸ್‌ ಹಡಗು

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

(Kurmarao M) People can be kept away from diseases only if the public is made aware about the spread of infectious diseases, their symptoms and taking precautionary measures. District Collector Kurmarao M instructed that the health department officials and staff should be active in this regard.

Comments are closed.