ಸಾಲ ಮರುಪಾವತಿಗೆ ಒತ್ತಡ ಹೇರಿದ್ರೆ ಕೇಸ್ : ಡಿಸಿ ಜಿ.ಜಗದೀಶ್

ಉಡುಪಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಜನರಿಂದ ಸಾಲ ವಸೂಲಾತಿಯ ಬಗ್ಗೆ ಒತ್ತಡ ಹೇರುವಂತಿಲ್ಲ. ಸಾಲ ಮರುಪಾವತಿಗೆ ಒತ್ತಡ ಹೇರಿದ್ರೆ ಅಂತವರ ವಿರುದ್ದ ಪ್ರಕರಣ ದಾಖಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಣಿಜ್ಯ ಚಟುವಟಿಕೆಗಳು ಸ್ತಬ್ದವಾಗಿದೆ. ಜನರು ಸಂಕಷ್ಟದಲ್ಲಿದ್ದಾರೆ. ಮೈಕ್ರೋ ಫೈನಾನ್ಸ್ ಗಳು, ಸಹಕಾರಿ ಸಂಘಗಳು ಹಾಗೂ ಇತರೆ ಹಣಕಾಸು ಸಂಸ್ಥೆಗಳ ಸಾಲ ವಸೂಲಾತಿದಾರರು, ಮನೆ ಮನೆಗೆ ಭೇಟಿ ನೀಡುವುದನ್ನು ಜೂನ್ 6 ರವರೆಗೆ ನಿರ್ಬಂಧಿಸಲಾಗಿದೆ.

ಅಲ್ಲದೇ ಮೈಕ್ರೋ ಫೈನಾನ್ಸ್, ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಸಾಲಗಾರರಿಗೆ ಸಾಲ ಮರು ಪಾವತಿ ಮಾಡಲು ಒತ್ತಡ ಹೇರುವಂತಿಲ್ಲ, ಅಲ್ಲದೇ ಸಾಲ ಮರುಪಾವತಿ ಮಾಡಲು ಒತ್ತಡ ಹೇರಿದ್ದಲ್ಲಿ , ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಲು ನೋಡೆಲ್ ಅಧಿಕಾರಿಗಳನ್ನಾಗಿ , ರುದ್ರೇಶ್ ಡಿ.ಸಿ , ಲೀಡ್ ಡಿಸ್ಟ್ರಿಕ್ಟ್ ಮ್ಯಾನೆಜರ್, 9449860858, ಪ್ರವೀಣ್ ಬಿ.ನಾಯಕ್, ಸಹಕಾರ ಸಂಘಗಳ ಉಪನಿಬಂಧಕರು 9448633338 ಇವರನ್ನು ನೇಮಿಸಲಾಗಿದೆ.

ಈ ನೋಡೆಲ್ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕೃತವಾದ ಸಾಲ ಮರುಪಾವತಿ ಕುರಿತು ದೂರುಗಳಿಗೆ ತಕ್ಷಣವೇ ಸ್ಪಂದಿಸುವುದು. ಮೈಕ್ರೋ ಫೈನಾನ್ಸ್ಗಳು, ಸಹಕಾರಿ ಸಂಘಗಳು, ಇತರೆ ಹಣಕಾಸು ಸಂಸ್ಥೆಗಳು ಹಾಗೂ ಸಾರ್ವಜನಿಕರ ಮಧ್ಯೆ ಸಮನ್ವಯತೆಯಿಂದ ಯಾವುದೇ ಗೊಂದಲ ಹಾಗೂಸಂಘರ್ಷ ಉಂಟಾಗದಂತೆ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ನೀಡವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Comments are closed.