ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಉಡುಪಿ ಡಿಸಿ : ಅನಗತ್ಯವಾಗಿ ರಸ್ತೆಗಿಳಿದ 35 ವಾಹನಗಳು ಸೀಜ್

ಉಡುಪಿ : ಲಾಕ್ ಡೌನ್ ಬೆನ್ನಲ್ಲೇ ಉಡುಪಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದ್ರೂ ಜನರು ಅನಗತ್ಯವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಇಂತಹ ವಾಹನ ಸವಾರರಿಗೆ ಖುದ್ದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಫೀಲ್ಡಿಗಳಿದು ಬಿಸಿಮುಟ್ಟಿಸಿದ್ದಾರೆ.

ಮಣಿಪಾಲದಲ್ಲಿ ಅಖಾಡಕ್ಕಿಳಿದ ಜಿಲ್ಲಾಧಿಕಾರಿಗಳು ನಿಯಮ ಉಲ್ಲಂಘಿಸಿ ತಿರುಗಾಡುತ್ತಿದ್ದ 35 ವಾಹನಗಳನ್ನು ಸೀಜ್ ಮಾಡಿದ್ದಾರೆ. 9 ಕ್ಕೂ ಅಧಿಕ ವಾಹನಗಳ ಮೇಲೆ ಕೇಸು ದಾಖಲಿಸಿ, ಬರೋಬ್ಬರಿ 20 ಸಾವಿರಕ್ಕೂ ಅಧಿಕ ದಂಡ ವಿಧಿಸಿದ್ದಾರೆ. ಲಾಕ್ ಡೌನ್ ಅವಧಿಯಲ್ಲಿ ಅನಗತ್ಯವಾಗಿ ತಿರುಗಾಡದಂತೆ ವಾಹನ ಸವಾರರಿಗೆ, ಸಾರ್ವಜನಿಕರಿಗೆ ಸೂಚನೆಯನ್ನು ನೀಡಿದ್ದಾರೆ.

ಮಣಿಪಾಲ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಗೌಡ ಮತ್ತು ಸಬ್ ಇನ್ಸ್ ಪೆಕ್ಟರ್ ರಾಜಶೇಖರ್ ಮಂದಲಿ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿ ದ್ದರು. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 10 ಗಂಟೆಯ ವರೆಗೆ ಅವಕಾಶ ಕಲ್ಪಿಸಲಾಗಿದೆ. ತದನಂತರದಲ್ಲಿ ವಾಹನಗಳು ರಸ್ತೆಗೆ ಇಳಿದ್ರೆ ಅಂತಹ ವಾಹನಗಳ ವಿರುದ್ದ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

https://kannada.newsnext.live/kalbhurghi-datta-temple-spliceal-pooja-corona/

Comments are closed.