ಅನಗತ್ಯವಾಗಿ ಹೊರಬಂದ್ರೆ ವಾಹನ ಸೀಜ್ : ಕುಂದಾಪುರದಲ್ಲಿ ಅಧಿಕಾರಿಗಳ ಕಾರ್ಯಾಚರಣೆ : ವಾಹನಗಳ ಜಪ್ತಿ

ಕುಂದಾಪುರ: ಅಗತ್ಯ ವಸ್ತುಗಳ ಖರೀದಿಯ ನೆಪದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬರುವವರ ವಿರುದ್ದ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮುಂದಾಗಿದೆ. ಜಿಲ್ಲಾಧಿಕಾರಿಗಳ ಸೂಚನೆಯ ಬೆನ್ನಲ್ಲೇ ಕುಂದಾಪುರದಲ್ಲಿ ವಿಭಾಗಾಧಿಕಾರಿ ಹಾಗೂ ಡಿವೈಎಸ್ ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಿಸಿ ಮುಟ್ಟಿಸಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂಜಾನೆಯ ವೇಳೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅನಗತ್ಯವಾಗಿ ಜನರು ಹೊರಗೆ ಬರುತ್ತಿದ್ದಾರೆ. ಇಂತಹವರ ವಾಹನಗಳನ್ನು ಸೀಜ್ ಮಾಡುವಂತೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸೂಚನೆಯನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕುಂದಾಪುರದಲ್ಲಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.

ಕೊರೊನಾ ಲಾಕ್ ಡೌನ್ ವೇಳೆಯಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬರುವವರ ವಾಹನಗಳನ್ನು ಸೀಜ್ ಮಾಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಸೂಚನೆಯನ್ನು ನೀಡಿದ್ದರು. ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ಕುಂದಾಪುರ ಡಿ.ವೈ.ಎಸ್ಪಿ‌ ಶ್ರೀಕಾಂತ್ ನೇತೃತ್ವದ ಪೊಲೀಸರ ತಂಡ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಕಾರ್ಯಾಚರಣೆ ನಡೆಸಿದ್ದು ಅನಗತ್ಯವಾಗಿ ಕುಂದಾಪುರ ಪೇಟೆಗಿಳಿದವರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರ ಹೊರತುಪಡಿಸಿ ಇತರೆಡೆಗಳಿಂದ ಸಕಾರಣವಿಲ್ಲದೆ ಪೇಟೆಗೆ ಬಂದವರ ಬೈಕ್, ಕಾರುಗಳನ್ನು ಸೀಜ್ ಮಾಡಲಾಗಿದೆ.

https://kannada.newsnext.live/sandalwood-meghanaraj-chirusarja-jr-chiru-corona-covid-19-panick/

ಕುಂದಾಪುರ ಪಿ.ಎಸ್.ಐ ಸದಾಶಿವ ಗವರೊಜಿ, ಅಮಾಸೆಬೈಲು ಪಿಎಸ್ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ವಾಹನಗಳನ್ನು ಅಡ್ಡಗಟ್ಟಿ ತಪಾಸಣೆಯನ್ನು ನಡೆಸಿದ್ದಾರೆ. ಅಲ್ಲದೇ ನಾಳೆಯಿಂದ ಯಾವುದೇ ಕಾರಣಕ್ಕೂ ಜನರು ಅನವಶ್ಯಕವಾಗಿ ಪೇಟೆಗೆ ಬರುವಂತಿಲ್ಲ. ಅಗತ್ಯ ವಸ್ತುಗಳನ್ನು ಸಮೀಪದ ಅಂಗಡಿಗಳಲ್ಲೇ ಖರೀದಿಸಬೇಕು. ತೀರಾ ಅವಶ್ಯಕತೆ ಇದ್ದರಷ್ಟೇ ಪೇಟೆಗೆ ಬರಬಹುದು ಎಂದು ಸೂಚಿಸಲಾಗಿದೆ.

https://kannada.newsnext.live/kollywood-actor-singer-soundarya-bala-nandkumar-received-bad-message/

Comments are closed.