Bike Accident : ಕೋಟ ಮಣೂರು ಬಳಿ ಭೀಕರ ಅಪಘಾತ : ಓರ್ವ ಸಾವು, ಇಬ್ಬರು ಗಂಭೀರ

ಕೋಟ : ಪಂಕ್ಚರ್‌ ಆಗಿ ನಿಂತಿದ್ದ ಲಾರಿಗೆ ಬೈಕ್‌ ಢಿಕ್ಕಿಯಾಗಿ (Bike Accident ) ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪದ ಮಣೂರಿನಲ್ಲಿ ನಡೆದಿದೆ.

ಪ್ರಸನ್ನ ಮೃತ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಮೂವರು ಯುವಕರು ಬೈಕಿನಲ್ಲಿ ಕುಂದಾಪುರದ ಕಡೆಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಮಣೂರು ಬೊಬ್ಬರ್ಯ ಕಟ್ಟೆಯ ಬಳಿಯಲ್ಲಿ ಲಾರಿಯೊಂದು ಪಂಚರ್‌ ಆಗಿ ನಿಂತಿತ್ತು. ಬಸ್‌ ಹಿಂಬಾಲಿಸಿಕೊಂಡು ಬಂದಿದ್ದ ಬೈಕ್‌ ಸವಾರನಿಗೆ ನಿಂತಿದ್ದ ಲಾರಿ ಗೋಚರಿಸದೆ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಕೋಟ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ : ಪ್ರೀತಿಸಿ ಮದುವೆಯಾದ 4 ತಿಂಗಳಲ್ಲೇ ಪತ್ನಿಯ ಕೊಂದ ಪತಿ

ಇದನ್ನೂ ಓದಿ : ಪೋಸ್ಟ್‌ ವೆಡ್ಡಿಂಗ್‌ ಪೋಟೋ ಶೂಟ್‌ ವೇಳೆ ದುರಂತ : ಮದುಮಗ ಸಾವು

Lorry Bike Accident one Death, 2 injured Near Kota Manoor

Comments are closed.