Surathkal Section 144 : ಸುರತ್ಕಲ್ ನಲ್ಲಿ ಚಾಕು ಇರಿದು ವ್ಯಕ್ತಿ ಕೊಲೆ : ಸೆಕ್ಷನ್‌ 144 ಜಾರಿ

ಮಂಗಳೂರು : ಸುರತ್ಕಲ್ ನ ಕಾಟಿಪಳ್ಳದಲ್ಲಿ ರಾತ್ರಿ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಈ ಘಟನೆಯ ಬೆನ್ನಲ್ಲೇ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿನ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144ರ (Surathkal Section 144) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ನಿನ್ನೆ ರಾತ್ರಿ ಸುರತ್ಕಲ್ ನ ಕಾಟಿಪಳ್ಳದಲ್ಲಿ ಜಲೀಲ್ (40 ವರ್ಷ) ಎಂಬಾತನನ್ನು ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಜಲೀಲ್ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿಯಾಗಿದ್ದು ನೈತಂಗಡಿಯಲ್ಲಿ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿ ನಡೆಸುತ್ತಿದ್ದರು. ಜಲೀಲ್ ಅಂಗಡಿಯಲ್ಲಿದ್ದ ವೇಳೆಯಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಕೂಡಲೇ ಜಲೀಲ್ ನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

ಘಟನೆಯ ಮಂಗಳೂರು ನಗರ ಪೊಲೀಸ್ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಅಹಿತಕರ ಘಟನೆ ನಡೆಯದಂತೆ ಭದ್ರತೆಯನ್ನು ಒದಗಿಸಿದ್ದಾರೆ. ಅಲ್ಲದೇ ಡಿಸೆಂಬರ್ 27ರ ಮುಂಜಾನೆ 6 ಗಂಟೆಯವರೆಗೆ ಸುರತ್ಕಲ್, ಪಣಂಬೂರು, ಕಾವೂರು, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Man stabbed to death in Surathkal Section 144 enforced in Mangalore

Comments are closed.