SSLC Student born Baby Girl : ಹೆಣ್ಣು ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ !

ಉಪ್ಪಿನಂಗಡಿ : ಶಾಲಾ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರವೆಸಗಿದ್ದು, 10ನೇ ತರಗತಿಯ ವಿದ್ಯಾರ್ಥಿನಿ ಹೆಣ್ಣು ಮಗುವಿಗೆ ( SSLC Student born Baby Girl) ಜನ್ಮ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಇದೀಗ ಅತ್ಯಾಚಾರದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಹತ್ತನೇ ತರಗತಿಯ ವಿದ್ಯಾರ್ಥಿನಿಯ ಹೊಟ್ಟೆ ದೊಡ್ಡದಾಗಿತ್ತು. ಮನೆಯವರೆಲ್ಲಾ ಗಡ್ಡೆ ಬೆಳೆದಿರಬೇಕು ಎಂದೇ ಬಾವಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದ ವೇಳೆಯಲ್ಲಿ ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಘಟನೆಯ ಕುರಿತು ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪ್ಪಿನಂಗಡಿ ಠಾಣೆಯ ಪೊಲೀಸರಿಗೆ ಸುದ್ದಿಯನ್ನು ಮುಟ್ಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಾಲಕಿಯನ್ನು ವಿಚಾರಣೆಗೆ ಒಳಪಡಿಸದ ವೇಳೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರೋದು ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಇಂಟನ್‌ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ವಕೀಲ ರಾಜೇಶ್‌ ಭಟ್‌ ಮನೆಯಲ್ಲಿ ಶೋಧ ಕಾರ್ಯ

ದಕ್ಷಿಣ ಕನ್ನಡ ಜಿಲ್ಲೆಯ ಹಿರೆಬಂಡಾಡಿ ಗ್ರಾಮದ ನಿವಾಸಿಯಾಗಿರುವ ಕೇಶವ ಎಂಬಾತ ತನ್ನ ಮೇಲೆ ಅತ್ಯಾಚಾರವೆಸಗಿರುವ ಕುರಿತು ಬಾಲಕಿ ಆರೋಪಿಸಿದ್ದಾಳೆ. ಈ ಹಿನ್ನೆಲೆಯಲ್ಲೀಗ ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : ಮಂಗಳೂರಲ್ಲಿ ಕಾಲೇಜು ಯುವಕ, ಯುವತಿಯನ್ನು ಹಿಂಬಾಲಿಸಿ ನೈತಿಕ ಪೊಲೀಸ್‌ ಗಿರಿ

(An SSLC student who gave born to a baby girl in Uppinagadi Mangalore)

Comments are closed.