ಮಂಗಳೂರು : withdrew the double ride ban order : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಹೇಯ ಕೃತ್ಯಗಳು ಜಿಲ್ಲೆಯಲ್ಲಿ ಘಟಿಸದಂತೆ ತಡೆಯುವ ಸಲುವಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಇಂದು ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಡಬಲ್ ರೈಡ್ ಮಾಡಲು ನಿಷೇಧ ಹೇರಿದ್ದ ಎಡಿಜಿಪಿ ಅಲೋಕ್ ಕುಮಾರ್ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಈ ನಿರ್ಧಾರವನ್ನು ಹಿಂಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳು ಘಟಿಸಿದ ಬಳಿಕ ಎರಡನೇ ಬಾರಿಗೆ ಎಡಿಜಿಪಿ ಅಲೋಕ್ ಕುಮಾರ್ ಇಂದು 2ನೇ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಬಜಪೆ ಹಾಗೂ ಸುರತ್ಕಲ್ ಪ್ರದೇಶಗಳಿಗೆ ಭೇಟಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್ ಸಾರ್ವಜನಿಕರು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಪರಿಶೀಲನಾ ಸಭೆಯನ್ನು ನಡೆಸಿದ್ದರು.

ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬೈಕುಗಳಲ್ಲಿ ಇಬ್ಬರು ಪುರುಷರು ಪ್ರಯಾಣಿಸುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿತ್ತು. ಮಹಿಳೆಯರು, ವೃದ್ಧರು ಹಾಗೂ 18 ವರ್ಷಕ್ಕಿಂತ ಕೆಳಗಿನವರಿಗೆ ಈ ನಿಯಮ ಅನ್ವಯವಾಗುತ್ತಿರಲಿಲ್ಲ. ಬೈಕ್ನಲ್ಲಿ ಬಂದು ಕೊಲೆ ನಡೆಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು .
ಎಡಿಜಿಪಿ ಅಲೋಕ್ ಕುಮಾರ್ ನಿರ್ಧಾರಕ್ಕೆ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶವನ್ನು ವಾಪಸ್ ಪಡೆದಿದ್ದಾರೆ. ಆದರೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ ಆರು ಗಂಟೆಯ ತನಕ ಜಿಲ್ಲೆಯಲ್ಲಿ ಸಂಚಾರಕ್ಕೆ ನಿರ್ಬಂಧ ಮುಂದುವರಿಯಲಿದೆ.
ಇದನ್ನು ಓದಿ : India Vs West Indies 3rd T20 : ಕೆರಿಬಿಯನ್ ನಾಡಿನಲ್ಲಿ “ಕನ್ನಡವೇ ಸತ್ಯ, ಕನ್ನಡವೇ ನಿತ್ಯ” ಪೋಸ್ಟರ್
ಇದನ್ನೂ ಓದಿ : Earthquake in Chattisgarh:ಛತ್ತೀಸ್‌ಗಢದಲ್ಲಿ 3.0 ತೀವ್ರತೆಯ ಭೂಕಂಪ
Mangalore City Police Commissioner withdrew the double ride ban order in the wake of widespread opposition