withdrew the double ride ban order : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಾಗಿದ್ದ ಡಬಲ್​ ರೈಡ್​ ನಿಷೇಧ ಆದೇಶ ರದ್ದು

ಮಂಗಳೂರು : withdrew the double ride ban order : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಹೇಯ ಕೃತ್ಯಗಳು ಜಿಲ್ಲೆಯಲ್ಲಿ ಘಟಿಸದಂತೆ ತಡೆಯುವ ಸಲುವಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ ಇಂದು ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಡಬಲ್​ ರೈಡ್​ ಮಾಡಲು ನಿಷೇಧ ಹೇರಿದ್ದ ಎಡಿಜಿಪಿ ಅಲೋಕ್​ ಕುಮಾರ್​ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್​ ಕಮಿಷನರ್​​ ಈ ನಿರ್ಧಾರವನ್ನು ಹಿಂಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳು ಘಟಿಸಿದ ಬಳಿಕ ಎರಡನೇ ಬಾರಿಗೆ ಎಡಿಜಿಪಿ ಅಲೋಕ್​ ಕುಮಾರ್​​ ಇಂದು 2ನೇ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಬಜಪೆ ಹಾಗೂ ಸುರತ್ಕಲ್​ ಪ್ರದೇಶಗಳಿಗೆ ಭೇಟಿ ನೀಡಿದ ಎಡಿಜಿಪಿ ಅಲೋಕ್​ ಕುಮಾರ್​ ಸಾರ್ವಜನಿಕರು ಹಾಗೂ ಪೊಲೀಸ್​ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಪರಿಶೀಲನಾ ಸಭೆಯನ್ನು ನಡೆಸಿದ್ದರು.


ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬೈಕುಗಳಲ್ಲಿ ಇಬ್ಬರು ಪುರುಷರು ಪ್ರಯಾಣಿಸುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿತ್ತು. ಮಹಿಳೆಯರು, ವೃದ್ಧರು ಹಾಗೂ 18 ವರ್ಷಕ್ಕಿಂತ ಕೆಳಗಿನವರಿಗೆ ಈ ನಿಯಮ ಅನ್ವಯವಾಗುತ್ತಿರಲಿಲ್ಲ. ಬೈಕ್​ನಲ್ಲಿ ಬಂದು ಕೊಲೆ ನಡೆಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು .

ಎಡಿಜಿಪಿ ಅಲೋಕ್​ ಕುಮಾರ್​ ನಿರ್ಧಾರಕ್ಕೆ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್​ ಕಮಿಷನರ್​​ ಎನ್​.ಶಶಿಕುಮಾರ್​​ ಆದೇಶವನ್ನು ವಾಪಸ್​ ಪಡೆದಿದ್ದಾರೆ. ಆದರೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ ಆರು ಗಂಟೆಯ ತನಕ ಜಿಲ್ಲೆಯಲ್ಲಿ ಸಂಚಾರಕ್ಕೆ ನಿರ್ಬಂಧ ಮುಂದುವರಿಯಲಿದೆ.

ಇದನ್ನು ಓದಿ : India Vs West Indies 3rd T20 : ಕೆರಿಬಿಯನ್ ನಾಡಿನಲ್ಲಿ “ಕನ್ನಡವೇ ಸತ್ಯ, ಕನ್ನಡವೇ ನಿತ್ಯ” ಪೋಸ್ಟರ್

ಇದನ್ನೂ ಓದಿ : Earthquake in Chattisgarh:ಛತ್ತೀಸ್‌ಗಢದಲ್ಲಿ 3.0 ತೀವ್ರತೆಯ ಭೂಕಂಪ

Mangalore City Police Commissioner withdrew the double ride ban order in the wake of widespread opposition

Comments are closed.