ಮಂಗಳೂರು : ಇಂದಿನಿಂದ ಟಫ್ ರೂಲ್ಸ್ ಜಾರಿ : ಏನಿರುತ್ತೆ..? ಏನಿರಲ್ಲ..?

ಮಂಗಳೂರು : ಕರಾವಳಿ ಭಾಗದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿದೆ. ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಆಚರಿಸಲಾಗುತ್ತಿದ್ದು, ಮೇ 15ರ ನಂತರ ಮದುವೆ ಸಮಾರಂಭಗಳಿಗೆ ಸಂಪೂರ್ಣವಾಗಿ ಬ್ರೇಕ್ ಹಾಕಿದೆ.

ಜಿಲ್ಲೆಯಲ್ಲಿ ಹೊಸ ಆದೇಶ ಇಂದು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬಂದಿದ್ದು, ಅಗತ್ಯ ವಸ್ತುಗಳ ಖರೀದಿಯನ್ನು ಮಾಡಲು ಬೆಳಗ್ಗೆ 6 ಗಂಟೆಯಿಂದ 9 ಗಂಟೆಯ ವರೆಗೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ. ಬೈಕಂಪಾಡಿಯ ಎಪಿಎಂಸಿಯಲ್ಲಿ ಬೆಳಗ್ಗೆ 10ರ ನಂತರ ಎಲ್ಲಾ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಇನ್ನು ಆನ್ ಲೈನ್ ಸೇವೆಯನ್ನು ಪೂರೈಸುವ ಸ್ವಿಗ್ಗಿ, ಜೊಮ್ಯಾಟೋ ಸೇವೆಯನ್ನು ರಾತ್ರಿ 11 ಗಂಟೆಯ ವರೆಗೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ. ಅನುಮತಿ ಪಡೆದಿರುವ ಸಮಾರಂಭಗಳನ್ನು ನಡೆಸಲು ಮಾತ್ರವೇ ಅವಕಾಶ ನೀಡಲಾಗಿದ್ದು, ಅನಗತ್ಯವಾಗಿ ಸಂಚರಿಸುವ ಎಲ್ಲಾ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗ ಜಿಲ್ಲಾಡಳಿತ ಎಚ್ಚರಿಕೆಯನ್ನು ನೀಡಿದೆ.

ಇನ್ನು ವೀಕೆಂಡ್ ಕರ್ಪ್ಯೂಗೆ ಕೂಡ ಪ್ರತ್ಯೇಕವಾಗಿರುವ ಮಾರ್ಗಸೂಚಿಯನ್ನು ಹೊರಡಿಸಿದ್ದು, ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯ ವರೆಗೆ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರಲಿದೆ. ಔಷಧ ಅಂಗಡಿ, ಆಸ್ಪತ್ರೆಗಳನ್ನು ಹೊರತು ಪಡಿಸಿ ಎಲ್ಲಾ ಸೇವೆಗಳು ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯ ವರೆಗೆ ಸಂಪೂರ್ಣವಾಗಿ ಬಂದ್ ಆಗಲಿದೆ. ರೋಗಿಗಳು ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂವನ್ನು ಲಾಕ್ ಡೌನ್ ಮಾದರಿಯಲ್ಲಿ ಆಚರಿಸಲಾಗುತ್ತಿದ್ದು ಕೇವಲ ಅನಾರೋಗ್ಯ ಕಾರಣದಿಂದಷ್ಟೇ ಮನೆಯಿಂದ ಹೊರಬರಲು ಅವಕಾಶ ಕಲ್ಪಿಸಲಾಗಿದೆ. ಆದ್ರೂ ಮನೆಯ ಸಮೀಪದಲ್ಲಿರುವ ಆಸ್ಪತ್ರೆ ಅಥವಾ ಮೆಡಿಕಲ್ ನಿಂದಲೇ ಆರೋಗ್ಯ ಸೇವೆಯನ್ನು ಪಡೆಯಲು ಮಾತ್ರವೇ ಅವಕಾಶ ನೀಡಲಾಗಿದೆ. ಆರೋಗ್ಯ ಸೇವೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲು ಆದೇಶಿಸಲಾಗಿದ್ದು, ಅಂಗಡಿ ಮುಂಗಟ್ಟು ಸಂಪೂರ್ಣವಾಗಿ ಸ್ತಬ್ದವಾಗಲಿದೆ. 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಕಾರ್ಖಾನೆಗಳು ಮಾತ್ರವೇ ಕಾರ್ಯನಿರ್ವಹಿಸಲಿವೆ. ಉಳಿದಂತೆ ಎಲ್ಲಾ ಕಚೇರಿಗಳು ಕೂಡ ಬಂದ್ ಆಗಲಿದೆ.

https://kannada.newsnext.live/bar-business-down-close-demand-bar-owners/

ಮೇ 15ರ ವರೆಗೆ ಹಿಂದಿನ ನಿಯಮಗಳಂತೆಯೇ ನಿಗದಿಯಾಗಿರುವ ಮದುವೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಮೇ 15ರ ನಂತರ ಜಿಲ್ಲೆಯಲ್ಲಿ ಯಾವುದೇ ಮದುವೆ ಕಾರ್ಯವನ್ನು ನಡೆಸುವಂತಿಲ್ಲ. ಮೇ 15ರ ಮಧ್ಯರಾತ್ರಿಯಿಂದ ಆದೇಶ ಜಾರಿಗೆ ಬರುತ್ತಿದ್ದು, ಮುಂದಿನ ಆದೇಶದ ವರೆಗೆ ಮದುವೆಗೆ ಸಂಪೂರ್ಣವಾಗಿ ಬ್ರೇಕ್ ಬೀಳಲಿದೆ.

Comments are closed.