ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಪೋಟ ! ಸಮುದಾಯಕ್ಕೆ ಹರಡಿತಾ ಮಹಾಮಾರಿ ?

0

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಲೇ ಇದೆ. ಜಿಲ್ಲೆಯಲ್ಲಿ ಇಂದು ಕೂಡ 300ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಗಳೂರು ನಗರದಲ್ಲಿಯೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಆತಂಕವನ್ನು ಮೂಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 8 ಸಾವಿರಕ್ಕೂ ಅಧಿಕ ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಇದುವರೆಗೆ 248 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ 3ನೇ ಸ್ಥಾನದಲ್ಲಿದೆ. ಇಂದು ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ತ್ರಿಶಕದ ಗಡಿದಾಟಿದೆ. ಅದ್ರಲ್ಲೂ ಮಂಗಳೂರು ನಗರದಲ್ಲಿಯೇ ದಾಖಲೆಯ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ಮಂಗಳೂರು ತಾಲೂಕಿನಲ್ಲಿ 198, ಬಂಟ್ವಾಳದಲ್ಲಿ 59, ಬೆಳ್ತಂಗಡಿ 15, ಪುತ್ತೂರು 13, ಸುಳ್ಯ 16, ಮೂಡಬಿದಿರೆ ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದೆ. ಈ ಕುರಿತು ಜಿಲ್ಲಾಡಳಿತ ಇನ್ನಷ್ಟೇ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭದಿಂದಲೂ ಕೊರೊನಾ ಸೋಂಕು ಆರ್ಭಟಿಸುತ್ತಿದ್ದು, ಇದೀಗ ಸೋಂಕಿತರ ಸಂಖ್ಯೆಯಲ್ಲಿಯೂ ಭಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.

ರಾಂಡಮ್ ಟೆಸ್ಟ್ ವೇಳೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದ್ದು, ಸೋಂಕು ಸಮುದಾಯಕ್ಕೆ ಹರಡಿರುವುದು ಖಚಿತವಾಗುತ್ತಿದೆ.

Leave A Reply

Your email address will not be published.