ಮಂಗಳೂರು : ಕುದ್ರೋಳಿಯಲ್ಲಿರುವ ಮಾಂಸ ಮಾರಾಟ ಮಳಿಗೆಗಳಲ್ಲಿ ಮಟನ್ ಗೆ ದನದ ಮಾಂಸವನ್ನು ಬೆರೆಸಿ ಮಾರಾಟ ಮಾಡಲಾಗುತ್ತಿದೆ ಅನ್ನೋ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ ಅವರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಈ ಕೃತ್ಯವೆಸಲಾಗುತ್ತಿದೆ ಅನ್ನೋ ಕುರಿತು ಪಾಲಿಕೆಗೆ ಸಾರ್ವಜನಿಕರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮಾರಾಟ ಮಳಿಗೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ದಾಳಿಯ ವೇಳೆಯಲ್ಲಿ ಕಸಾಯಿಖಾತೆ ಮತ್ತು ಮಾರಾಟ ಮಳಿಗೆಗಳ ಪರವಾನಿಗೆಯನ್ನು ಪರಶೀಲನೆ ಮಾಡಲಾಯಿತು. ಅಕ್ರಮವಾಗಿ ಮಾರಾಟ ಮತ್ತು ವಧೆ ನಡೆಸುತ್ತಿರುವ ಕುರಿತು ನಿಗಾ ಇರಿಸುವುದರ ಜೊತೆಗೆ ಮಾಂಸ ಮಾರಾಟ ಮಳಿಗೆಗಳಲ್ಲಿ ಮಾರಾಟವಾಗುವ ಮಾಂಸಕ್ಕೆ ಸೀಲ್ ಹಾಗೂ ಬಿಲ್ ನೀಡುವಂತೆ ಸೂಚಿಸಿದ್ದಾರೆ.

ಯಾವುದೇ ಕಾರಣಕ್ಕೂ ಅಕ್ರಮವಾಗಿ ಮಾಂಸ ಮಾರಾಟ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳವುದಾಗಿಯೂ ಎಚ್ಚರಿಸಿದ್ದಾರೆ. ಅಲ್ಲದೇ ಮಾಂಸ ಮಾರಾಟ ಮಳಿಗೆಗಳ ಮೇಲೆ ನಿಗಾ ಇರಿಸುವಂತೆ ಮೇಯರ್ ದಿವಾಕರ ಪಾಂಡೇಶ್ವರ್ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.