ಮಂಗಳೂರು: ಕಾಲೇಜು ಶುಲ್ಕ ಪಾವತಿಗೆ ಕಿರುಕುಳ : ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು : ಕಾಲೇಜು ಶುಲ್ಕ ಪಾವತಿಗೆ ಟಾರ್ಚರ್‌ ನೀಡಿದ ಹಿನ್ನೆಲೆಯಲ್ಲಿ ಬಿಎಸ್ಸಿ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕದ್ರಿಯಲ್ಲಿರುವ ಕೊಲಾಸೋ ನರ್ಸಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ನೀನಾ ಸತೀಶ್‌ ( 19 ವರ್ಷ) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಕಾಸರಗೋಡು ಮೂಲದ ನೀನಾ ಸತೀಶ್‌ ನಗರದ ಕೊಲಾಸೋ ನರ್ಸಿಂಗ್‌ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು. ನಿನ್ನೆ ಕದ್ರಿಯಲ್ಲಿರುವ ಕಾಲೇಜಿನ ಹಾಸ್ಟೇಲ್‌ನ ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ವೈದ್ಯರು ನೀನಾ ಸತೀಶ್‌ ಇಂದು ಮೃತಪಟ್ಟಿರುವುದನ್ನು ಘೋಷಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ನೀನಾ ಸತೀಶ್‌ ಬರೆದಿಟ್ಟಿರುವ ಡೆತ್‌ ನೋಟ್‌ ಪತ್ತೆಯಾಗಿದೆ. ನೀನಾ ಸತೀಶ್‌ ಪ್ರಥಮ ಬಿಸ್ಸಿ ನರ್ಸಿಂಗ್‌ ವಿದ್ಯಾಭ್ಯಾಸವನ್ನು ಪಡೆಯುವ ಸಲುವಾಗಿ ಸುಮಾರು 75 ಸಾವಿರ ರೂಪಾಯಿ ಫೀಸ್‌ ಪಾವತಿ ಮಾಡಿದ್ದಾರೆ. ಉಳಿದ ಹಣವನ್ನು ಪಾವತಿ ಮಾಡುವಂತೆ ಕಾಲೇಜಿನ ಆಡಳಿತ ಮಂಡಳಿ ಕೇಳುತ್ತಿದ್ದಾರೆ. ಉಳಿದ ಹಣ ಪಾವತಿ ಮಾಡದೇ ಇದ್ರೆ ಯೂನಿಫಾರ್ಮ ನೀಡುವುದಿಲ್ಲ ಎಂದು ತಿಳಿಸಿದ್ದರು. ಇದೇ ಕಾರಣಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತರಾದ ಎನ್‌.ಶಶಿಕುಮಾರ್‌ ಅವರು ತಿಳಿಸಿದ್ದಾರೆ.

ಕೊಲಾಸೋ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ಗೆ 1.25 ಲಕ್ಷ ರೂಪಾಯಿ ಶುಲ್ಕ ಪಾವತಿ ಮಾಡಬೇಕಾಗಿತ್ತು. ಆದರೆ ಉಳಿದ ಹಣವನ್ನು ಪಾವತಿ ಮಾಡಲು ಆಕೆಯಿಂದ ಸಾಧ್ಯವಾಗಿರಲಿಲ್ಲ. ತನ್ನ ತಾಯಿ ಕೂಲಿ ಮಾಡಿ ನೀನಾ ಸತೀಶ್‌ಗೆ ವಿದ್ಯಾಭ್ಯಾಸವನ್ನು ನೀಡುತ್ತಿದ್ದರು. ಇನ್ನು ತಾಯಿಗೆ ಕಷ್ಟಕೊಡಲು ತಾನು ರೆಡಿಯಿಲ್ಲ ಅನ್ನೋ ವಿಚಾರವನ್ನೂ ಕೂಡ ಆಕೆ ಉಲ್ಲೇಖಿಸಿದ್ದಾಳೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಮಂಗಳೂರಲ್ಲಿ ಅಪ್ಪನಿಂದ ಮಗನ ಮೇಲೆ ಫೈರಿಂಗ್‌

ಕೊರೊನಾ ವೈರಸ್‌ ಸೋಂಕಿನ ಬೆನ್ನಲ್ಲೇ ಮಂಗಳೂರಿನ ಖಾಸಗಿ ಕಾಲೇಜುಗಳಲ್ಲಿ ಫೀಸ್‌ ಟಾರ್ಚರ್‌ ಹೆಚ್ಚುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದೀಗ ಕಾಲೇಜಿನ ವಿದ್ಯಾರ್ಥಿನಿ ಫೀಸ್‌ ಟಾರ್ಚರ್‌ನಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಪೊಲೀಸ್‌ ಇಲಾಖೆ ಹಾಗೂ ಸರಕಾರ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಾಗಿದೆ. ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ :  ಮೂಡಬಿದಿರೆ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಯತ್ನ

( Colaco college fees torture BSc Nursing Student Suicide Mangalore )

Comments are closed.