ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯೋರ್ವಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆ ಎಂಬಲ್ಲಿ ನಡೆದಿದೆ.
ಹುಣ್ಸೆಕಟ್ಟೆಯ ನಿವಾಸಿ ದೀಕ್ಷಾ ( 22 ವರ್ಷ) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಕಾಂ ಪದವಿ ಪಡೆಯುತ್ತಿದ್ದ ದೀಕ್ಷಾ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು ಅಂತಾ ಹೇಳಲಾಗುತ್ತಿದೆ. ಈ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ ದೀಕ್ಷಾ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲೀಗ ಪೊಲೀಸರು ತನಿಖೆ ಯನ್ನು ನಡೆಸುತ್ತಿದ್ದಾರೆ. ಅಲ್ಲದೇ ಡೆತ್‌ನೋಟ್‌ನಲ್ಲಿ ಯಾವೆಲ್ಲಾ ವಿಚಾರವನ್ನು ಬರೆದಿದ್ದಾಳೆ ಅನ್ನೋದು ಪೊಲೀಸರ ತನಿಖೆಯ ನಂತರವಷ್ಟೇ ತಿಳಿದು ಬರಬೇಕಾಗಿದೆ.
ಇದನ್ನೂ ಓದಿ : ಪೊಲೀಸಪ್ಪನ ಕಾಮಪುರಾಣ : ಅಪ್ರಾಪ್ತ ಯುವತಿಗೆ ಅಬಾರ್ಷನ್ ಮಾಡಿಸಿದ್ದ ಪೊಲೀಸ್ ಶಿವರಾಜ್ ವಿರುದ್ದ ದೂರು
ಇದನ್ನೂ ಓದಿ : ಪೆಟ್ರೋಲ್ ಬಂಕ್ ಮ್ಯಾನೇಜರ್ ಮೇಲೆ ಹಲ್ಲೆ : 4.20 ಲಕ್ಷ ರೂ. ದೋಚಿ ದುಷ್ಕರ್ಮಿಗಳು ಪರಾರಿ
( Mcom student Deeksha suicide by writing a death note in Belthangadi Mangaluru )