ಮಂಗಳೂರು : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ

ಮಂಗಳೂರು : ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಿಸಿ ಮತ್ತು ಬರುವ ಚಾಕೋಲೇಟ್ ನೀಡಿ ನಂತರ ಸಾಮಾಹಿಕವಾಗಿ ಅತ್ಯಾಚಾರವೆಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಎಂಬಲ್ಲಿ ನಡೆದಿದೆ.

ಆಟೋ ಸ್ಟ್ಯಾಂಡ್ ಬಳಿಯಲ್ಲಿ ನಿಂತಿದ್ದ ಬಾಲಕಿಯನ್ನೇ ಪರಿಚಿತರೇ ಅಪಹರಿಸಿದ್ದಾರೆ. ನಂತರದ ಆಕೆಗೆ ಮತ್ತು ಬರಿಸುವ ಚಾಕಲೇಟ್‌ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರವನ್ನು ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಸದ್ಯ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಈ ಕುರಿತು ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಮೈಸೂರಿನಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬೆನ್ನಲ್ಲೇ ಇದೀಗ ಕರಾವಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಪೊಲೀಸ್‌ ಇಲಾಖೆ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯನ್ನು ಮುಂದುವರಿಸಿದೆ. ಘಟನೆಯ ಬೆನ್ನಲ್ಲೇ ಕರಾವಳಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ : ಶೂಟೌಟ್‌ಗೆ ಮಗ ಸಾವು, ತಂದೆ ರಾಜೇಶ್‌ ಪ್ರಭು ಅರೆಸ್ಟ್‌

ಇದನ್ನೂ ಓದಿ : ಕೈ ಹಿಡಿದ ಪತ್ನಿಯನ್ನೇ 500 ರೂಪಾಯಿ ಮಾರಾಟ ಮಾಡಿದ ಪತಿ : ನಂತರ ನಡೆಯಿತು ಪೈಶಾಚಿಕ ಕೃತ್ಯ

(Minor girls abducted, mass raped in Bantwal Near Mangalore )

Comments are closed.