ಮಂಗಳೂರು : ಬೀಚ್‌ಗೆ ತೆರಳಿ ವಾಪಾಸಾಗುತ್ತಿದ್ದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಗುಂಪೊಂದು ದಾಳಿ ನಡೆಸಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಓರ್ವರ ಎದುರಲ್ಲೇ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಉಡುಪಿಯ ಮಲ್ಪೆ ಬೀಚ್‌ಗೆ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತೆರಳಿದ್ದರು. ಕಾರಿನಲ್ಲಿ ಬರುತ್ತಿದ್ದ ಅನ್ಯಕೋಮಿನ ಯುವಕ -ಯುವತಿಯರನ್ನು ಅಡ್ಡಗಟ್ಟಿದ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಲು ಮುಂದಾಗಿದೆ. ಈ ವೇಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದ ಇನ್‌ಸ್ಪೆಕ್ಟರ್ ಶರೀಪ್ ಅವರು ಕಾರಿನ ಮೇಲೆ ನಡೆಯುತ್ತಿದ್ದ ದಾಳಿಯನ್ನು ತಡೆದಿದ್ದಾರೆ.
ಇನ್ನು ಕಾರಿನಲ್ಲಿದ್ದ ವಿದ್ಯಾರ್ಥಿಗಳು ಅಂಗಲಾಚಿದ್ರೂ ಕೂಡ ಕಾರ್ಯಕರ್ತರು ಪೊಲೀಸ್ ಇನ್‌ಸ್ಪೆಕ್ಟರ್ ಎದುರಲ್ಲೇ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸುರತ್ಕಲ್ ಠಾಣೆಯ ಪೊಲೀಸೆರು ಇದೀಗ ಐವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ಯುವಕ ಹಾಗೂ ಯುವತಿಯರ ಮೇಲೆ ಹಲ್ಲೆ ನಡೆಯುತ್ತಿದೆ ಅನ್ನೋ ಆರೋಪವೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಬೇಕಾಗಿದೆ.
ಇದನ್ನೂ ಓದಿ : ದಾಖಲೆ ಇಲ್ಲದೆ ವಾಹನ ರಸ್ತೆಗೆ ಇಳಿದ್ರೆ ಹುಷಾರ್ : ಸವಾರರ ಸುರಕ್ಷತೆಗೆ ಮಂಗಳೂರಲ್ಲಿ ಟ್ರಾಫಿಕ್ ಡ್ರೈವ್
ಇದನ್ನೂ ಓದಿ : ಬ್ರಹ್ಮಾವರ : ದೇವಸ್ಥಾನದ ಆಡಳಿತದ ಮೊಕ್ತೇಸರ ಆತ್ಮಹತ್ಯೆ
(Moral Policing Again Surathakal Near Mangalore, 5 Arrested )