ಮಂಗಳೂರು : ಆರೋಪಿಯೋರ್ವ ನ್ಯಾಯಾಲಯದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಗರದ ಹೊರವಲಯದ ರವಿರಾಜ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.
ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗಾಗಿ ಇಂದು ರವಿರಾಜ್ ನ್ಯಾಯಾಲಯಕ್ಕೆ ಆಗಮಿಸಿದ್ದ. ವಿಚಾರಣೆ ಮುಗಿಸಿ ಹೊರಬರುತ್ತಿದ್ದಂತೆಯೇ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆಯಲ್ಲಿ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತೀವ್ರ ರಕ್ತಶ್ರಾವದಿಂದ ಬಳಲುತ್ತಿದ್ದ ರವಿರಾಜ್‌ನನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೋಲ್ಟ್‌ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ : ಮಂಗಳೂರಲ್ಲಿ ವ್ಯಕ್ತಿಯ ಬಂಧನ
ಇದನ್ನೂ ಓದಿ : ಕೇರಳಕ್ಕೆ ಶ್ರೀಲಂಕಾ ಉಗ್ರರು ನುಸುಳಿರುವ ಶಂಕೆ : ಕರಾವಳಿಯಾದ್ಯಂತ ಹೈ ಅಲರ್ಟ್
(Mangalore Pocso Accused Jumps to death from Court Building in Mangalore)