NIA Raid : ಮೋದಿ ಕಾರ್ಯಕ್ರಮದ ವೇಳೆ ದುಷ್ಕತ್ಯಕ್ಕೆ ಸಂಚು : ದಕ್ಷಿಣ ಕನ್ನಡ 16 ಕಡೆ ಎನ್‌ಐಎ ದಾಳಿ

ಮಂಗಳೂರು : NIA Raid : ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆಯಲ್ಲಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ ಜಿಲ್ಲೆಯ ಒಟ್ಟು 16 ಕಡೆಗಳಲ್ಲಿ ಎನ್‌ಐಎ ದಾಳಿ ನಡೆಸಿದೆ.

ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಬಿಹಾರದ ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ನಡೆದಿತ್ತು. ಈ ವೇಳೆಯಲ್ಲಿ ವಿಧ್ವಸಂಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದರು ಅನ್ನೋ ಆಘಾತಕಾರಿ ಮಾಹಿತಿ ಬಯಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಕಘೆತ್ತಿಕೊಂಡ ಎನ್‌ಐಎ ಅಧಿಕಾರಿಗಳು ಈಗಾಗಲೇ ಫುಲ್ವಾರಿ ಶರೀಫ್‌ ಎಂಬವನನ್ನು ಬಂಧಿಸಿದ್ದರು. ನಂತರ ಆತನ ವಿಚಾರಣೆಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಣಕಾಸಿನ ನೆರವು ನೀಡಲಾಗಿದೆ ಅನ್ನೋ ಆಘಾತಕಾರಿ ಮಾಹಿತಿ ಹೊರಬಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ

ಇದೇ ಪ್ರಕರಣದ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ದಾಳಿಯನ್ನು ನಡೆಸಿದ್ದಾರೆ. ಮನೆ, ಆಸ್ಪತ್ರೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಿ ಪರಿಶೀಲನೆಯನ್ನು ನಡೆಸಿದ್ದಾರೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು, ಅಲ್ಲದೇ ಬಂಟ್ವಾಳದ ಮೊಹಮ್ಮದ್‌ ಸಿನಾನ್‌, ಸರ್ಫ್ರಾಜ್‌ ನವಾಜ್‌, ಇಕ್ಬಾಲ್‌, ಪುತ್ತೂರಿನ ಅಬ್ದುಲ್‌ ರಫೀಕೆ ಎಂಬವರನ್ನು ಬಂಧಿಸಿದ್ದರು. ಇದೀಗ ಮತ್ತೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಕಡೆಗಳಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : Police constable commits suicide : ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

ಇದನ್ನೂ ಓದಿ : Delhi Sakshi Murder : 16 ವರ್ಷದ ಪ್ರೇಯಸಿಯನ್ನು ಕೊಲೆಗೆ 15 ದಿನ ಹಿಂದೆ ಚಾಕು ಖರೀದಿಸಿದ್ದ ಪ್ರೇಮಿ ಸಾಹಿಲ್‌

Comments are closed.