- Advertisement -
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿರಿಯ ಮುಖಂಡ ಉಮ್ಮರ್ ಫಜೀರು ( 60 ವರ್ಷ) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶುಕ್ರವಾರ ಮುಂಜಾನೆ ಹೃದಯ ಬೇನೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಕಣಚೂರು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿರುವ ಉಮ್ಮರ್ ಪಜೀರು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಉಮ್ಮರ್ ಪಜೀರು ನಿಧನಕ್ಕೆ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.