ಕರಾವಳಿಯಲ್ಲಿ ಆತಂಕ ಮೂಡಿಸಿದ ಕೊರೊನಾ : ದ.ಕ,‌ ಉಡುಪಿಯಲ್ಲಿ 9,143 ಸಕ್ರೀಯ ಪ್ರಕರಣ..!!!

ಉಡುಪಿ/ ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಅದ್ರಲ್ಲೂ ಕಳೆದೆರಡು ದಿನಗಳಿಂದ ಲೂ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಪ್ರಕರಣಗಳು ದಾಖಲಾಗುತ್ತಿದ್ದು, ಸಕ್ರೀಯ ಪ್ರಕರಣ ಗಳ ಸಂಖ್ಯೆ 9,143ಕ್ಕೆ ಏರಿಕೆಯಾಗಿದೆ.

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಹಲವರನ್ನು ಬಲಿ ಪಡೆದಿದ್ದ ಕೊರೊನಾ ಸೋಂಕು ಇದೀಗ ಮತ್ತೆ ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಆರ್ಭಟ ಶುರುಮಾಡಿದೆ. ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಲೂ ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. ಜಿಲ್ಲೆಯಲ್ಲಿ ಶುಕ್ರವಾರ 1205 ಪ್ರಕರಣ ದಾಖಲಾಗಿದೆ. ಈ ಮೂಲಕ ಸಕ್ರೀಯ ಪ್ರಕರಣಗಳ ಸಂಖ್ಯೆ 6,486ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಬರೋಬ್ಬರಿ 755 ಮಂದಿ ಕೊರೊನಾ ಹೆಮ್ಮಾರಿಗೆ ಬಲಿಯಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿಯೂ ಹೆಮ್ಮಾರಿ‌ ಕೊರೊನಾ ಆರ್ಭಟ‌ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದಲೂ 500 ಕ್ಕೂ ಅಧಿಕ ಪ್ರಕರಣ ದಾಖಲಾಗುತ್ತಿದೆ. ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 660 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 2057ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 198 ಮಂದಿ ಸಾವನ್ನಪ್ಪಿದ್ದಾರೆ.

ಕರಾವಳಿಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿ ದ್ದಂತೆಯೇ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿವೆ. ಜನರು ಕೊಂಚ ಎಚ್ಚರ ತಪ್ಪಿದ್ರೂ ಅಪಾಯ ಎದುರಾಗೋದು ಗ್ಯಾರಂಟಿ.

Comments are closed.