ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆ ಬರೆಯುತ್ತಿದೆ‌ ಕೊರೊನಾ ಸೋಂಕು

ಉಡುಪಿ /ಮಂಗಳೂರು : ಕರಾವಳಿ ಭಾಗದಲ್ಲಿ ಕೊರೊನಾ ಎರಡ ನೇ ಅಲೆಯ ಅಬ್ಬರ‌ ಜೋರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 272 ಮಂದಿಗೆ ಕೊರೊನಾ‌ ಸೋಂಕು ಕಾಣಿಸಿಕೊಂಡಿದ್ದರೆ, ಉಡುಪಿ ಜಿಲ್ಲೆ ಯಲ್ಲಿ 152 ಮಂದಿಗೆ ಸೋಂಕು ದೃಢಪಟ್ಟಿದ್ದು ಆತಂಕ ಮೂಡಿಸಿದೆ.

ದಕ್ಷಿಣ ಕನ್ನಡ‌ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದಲೂ ದಾಖಲೆಯ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂದು 272 ಮಂದಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 38,143ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1,764 ಸಕ್ರೀಯ ಪ್ರಕರಣಗಳಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಆಘಾತ ಮೂಡಿಸಿದೆ. ಮೊದಲ ಅಲೆ ಜಿಲ್ಲೆಯಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಬಲಿ ಪಡೆದಿದ್ದು, ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 742 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಉಡುಪಿ ಜಿಲ್ಲೆಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗು ತ್ತಿದೆ. ಇಂದು 152 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದುವರೆಗೆ ಕೊರೊನಾ ಸೋಂಕಿಗೆ ತುತ್ತಾಗಿರುವವರ ಸಂಖ್ಯೆ 26,740ಕ್ಕೆ ಏರಿಕೆ‌ ಕಂಡಿದೆ. ಜಿಲ್ಲೆಯಲ್ಲಿ ಒಟ್ಟು 660 ಸಕ್ರೀಯ ಕೊರೊನಾ ಸೋಂಕಿತ ಪ್ರಕರಣಗಳಿದ್ದು, ಇದುವರೆಗೆ ಕೊರೊನಾ ಹೆಮ್ಮಾರಿ ಜಿಲ್ಲೆಯಲ್ಲಿ ಒಟ್ಟು 193 ಮಂದಿಯನ್ನು ಬಲಿ ಪಡೆದಿದೆ.

Comments are closed.