ಮಂಗಳೂರು : ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆಯಲ್ಲಿ ಬೋಟ್ ವೊಂದು ದಡಕ್ಕೆ ಅಪ್ಪಳಿಸಿದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಘಟನೆ ಯಲ್ಲಿ ಬೋಟಿನಲ್ಲಿದ್ದ 10 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಅಝಾನ್ ಹೆಸರಿನ ಬೋಟ್ ಇದಾಗಿದ್ದು, ಉಳ್ಳಾಲದ ಅಶ್ರಫ್ ಎಂಬವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಮುಂಜಾನೆಯ ವೇಳೆಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೋಟಿನಲ್ಲಿ ಕನ್ಯಾಕುಮಾರಿ ಮೂಲದ ಕಾರ್ಮಿಕರಿದ್ದು, ಅವರು ಮದ್ಯಪಾನ ಮಾಡಿದ್ದರು ಎಂದು ತಿಳಿದು ಬಂದಿದೆ.

ಘಟನೆಯ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.