Mangaluru accident : ಮಂಗಳೂರು : ಬಸ್- ಕಾರು ನಡುವೆ ಭೀಕರ ಅಪಘಾತ: ಆರು ಮಂದಿ ಸಾವು

ಸುಳ್ಯ: (Mangaluru accident) ಸಾರಿಗೆ ಸಂಸ್ಥೆ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಗ್ರಾಮವಾದ ಸಂಪಾಜೆಯಲ್ಲಿ ಶುಕ್ರವಾರ ಸಂಭವಿಸಿದೆ. ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಈ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂರು ಮಕ್ಕಳು, ಇಬ್ಬರು ಮಹಿಳೆಯರು ಸೇರಿ ಒಟ್ಟು 6 ಮಂದಿ ಮೃತರಾಗಿದ್ದಾರೆ. ದುರ್ಘಟನೆಯಲ್ಲಿ ಒಂದು ಮಗು ಸಹಿತ ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಸುಳ್ಯದಿಂದ ವಿರಾಜಪೇಟೆ ಕಡೆಗೆ ಹೊರಟಿದ್ದ ಬಸ್ ಮತ್ತು ಮಡಿಕೇರಿಯಿಂದ ಸುಳ್ಯದ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ನಡುವೆ ಅಪಘಾತವಾಗಿದೆ. ಕಾರು ಸಂಪಾಜೆ ಪೆಟ್ರೋಲ್ ಪಂಪಿನಲ್ಲಿ ಪೆಟ್ರೋಲ್ ಹಾಕಿ ರಸ್ತೆಗೆ ಇಳಿಯುತ್ತಿದ್ದಂತೆ ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಉಳಿದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಾರಿನ ಬಾನೆಟಿನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಆಸ್ಪತ್ರೆ ದಾರಿಯಲ್ಲಿ ಮಕ್ಕಳು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

ಕಾರಿನಲ್ಲಿದ್ದವರೆಲ್ಲ ಮಂಡ್ಯ ಮೂಲದ ಮಳವಳ್ಳಿಯವರು ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ದಾಖಲಾಗಿದೆ. ಘಟನೆಯಲ್ಲಿ ಮೃತಪಟ್ಟ ಮೃತದೇಹಗಳನ್ನು ಖಾಸಗಿ ಆಸ್ಪತ್ರೆ ಹಾಗೂ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ. ಮೃತರ ಹಾಗೂ ಗಾಯಾಳುಗಳ ವಿಳಾಸ ಇನ್ನಷ್ಟೇ ತಿಳಿದುಬರಬೇಕಿದೆ. ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಉಪಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ಸ್ಕೂಟರ್‌‌ಗೆ ಬಸ್ ಢಿಕ್ಕಿ – ಸವಾರ ಸ್ಥಳದಲ್ಲಿಯೇ ಮೃತ್ಯು, ಚಾಲಕ ಪರಾರಿ

ಬಂಟ್ವಾಳ : ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ಕೆಎಸ್ಆರ್‌‌ಟಿಸಿ ಬಸ್ ಸ್ಕೂಟರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ (60) ಮೃತಪಟ್ಟ ವ್ಯಕ್ತಿ.

ಇದನ್ನೂ ಓದಿ : Land scam case : ಐಎಎಸ್ ಅಧಿಕಾರಿ ಛಾವಿ ರಂಜನ್ ವಿರುದ್ಧ ಇಡಿ ದಾಳಿ

ಡೊಂಬಯ್ಯ ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇನ್ನು ಡೊಂಬಯ್ಯ ಬಿಸಿರೋಡು ಕುಲಾಲ ಸಮುದಾಯ ಭವನದಲ್ಲಿ ಅನೇಕ ವರ್ಷಗಳಿಂದ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರು ಸಂಬಂಧಿಕರ ಮನೆಯಲ್ಲಿ ಸಂಕ್ರಮಣದ ದಿನದಂದು ದೈವದ ಕೆಲಸಕ್ಕೆ ಹೂ ತರಲೆಂದು ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ಕೂಡಲೇ ಬಸ್ ಚಾಲಕ ಬಸ್ ನಿಂದ ಇಳಿದು ಪರಾರಿಯಾಗಿದದು, ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ‌ನೀಡಿದ್ದಾರೆ.

Mangaluru accident: Mangaluru: A terrible accident between a bus and a car: Six people died

Comments are closed.