ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಕಾರಿನ ಮೇಲೆ ಕಲ್ಲು ತೂರಾಟ : ನಿಷೇಧಾಜ್ಞೆ ಜಾರಿ

ಮಂಗಳೂರು : ಚುನಾವಣಾ ಮತದಾನದ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಘರ್ಷಣೆ ( Bjp Congress Workers Clash) ನಡೆದಿದೆ. ಮೂಡಬಿದರೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಿಥುನ್‌ ರೈ ಕಾರಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು. ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.

ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಿಂದಾಗಿ ಮೂವರು ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಪೊಲೀಸ್‌ ಸಿಬ್ಬಂದಿಗಳಿಗೆ ಗಾಯಗಳಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿ. ಆದರೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ಅವರು ತಿಳಿಸಿದ್ದಾರೆ. ಅಲ್ಲದೇ ಘಟನಾ ಸ್ಥಳದಲ್ಲಿ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದ್ದು, ಮೂಡಶೆಡ್ಡೆಯಲ್ಲಿ ಹೆಚ್ಚಿನ ಚೆಕ್‌ಪೋಸ್ಟ್‌ ರಚಿಸಿ ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಮೂಡುಶೆಡ್ಡೆಯಲ್ಲಿ ಬಿಜೆಪಿ ಕಾರ್ಯಕರ್ತರು ನೆರೆದಿದ್ದರು. ಈ ವೇಳೆಯಲ್ಲಿ ಮಿಥುನ್‌ ರೈ ಬೆಂಬಲಿಗರಿದ್ದ ಕಾರು ಅಲ್ಲಿಗೆ ಬಂದಿದೆ. ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಈ ವೇಳೆಯಲ್ಲಿ ದಾರಿಯಲ್ಲಿ ಸಾಗುತ್ತಿದ್ದ ಮಿಥುನ್‌ ರೈ ಮತ್ತು ಬೆಂಬಲಿಗರು ಕಾರು ನಿಲ್ಲಿಸಿ ಕಾಂಗ್ರೆಸ್‌ ಗೆ ಜೈ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಮೂಡಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಉಮಾನಾಥ ಕೋಟ್ಯಾನ್‌ ಅವರು ಸ್ಪರ್ಧೆ ಮಾಡಿದ್ದು, ಕಾಂಗ್ರೆಸ್‌ ಪಕ್ಷದಿಂದ ಡಿ.ಕೆ.ಶಿವಕುಮಾರ್‌ ಅವರ ಆಪ್ತ ಮಿಥುನ್‌ ರೈ ಸ್ಪರ್ಧಿಸಿದ್ದರು. ಇದರಿಂದಾಗಿ ಕ್ಷೇತ್ರದಲ್ಲಿ ಈ ಬಾರಿ ಜಿದ್ದಾಜಿದ್ದಿನ ಹೋರಾಟ ಏರ್ಪಟ್ಟಿತ್ತು. ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು.

ಇದನ್ನೂ ಓದಿ : ಮೋಚಾ ಚಂಡಮಾರುತ ಅಲೆ : ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ

ಇದನ್ನೂ ಓದಿ : Karnataka exit poll 2023 : ಚುನಾವಣೋತ್ತರ ಸಮೀಕ್ಷೆ, ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸ್ಥಾನ ? ಯಾವ ಪಕ್ಷಕ್ಕೆ ಅಧಿಕಾರ ?

ಇದನ್ನೂ ಓದಿ : ರಾಜ್ಯದಲ್ಲಿ ಅತಂತ್ರ ಸರಕಾರ : ಏನ್‌ ಹೇಳುತ್ತೆ EXIT POLL

Mangaluru Stone Hurled at Congress Candidate Mithun Rai Bjp Congress Workers Clash

Comments are closed.