Mangaluru university: ಪರೀಕ್ಷೆ ಫಲಿತಾಂಶ ವಿಳಂಬ: ಮಂಗಳೂರು ವಿವಿಗೆ ನುಗ್ಗಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರು

ಮಂಗಳೂರು: (Mangaluru university) ಪರೀಕ್ಷೆ ಫಲಿತಾಂಶ ವಿಳಂಬದ ವಿರುದ್ದ ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಮಂಗಳೂರು ವಿ.ವಿ ಫಲಿತಾಂಶ ವಿಳಂಬ ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಕೊಣಾಜೆಯಲ್ಲಿರುವ ವಿವಿಯ ಆಡಳಿತ ಸೌಧಕ್ಕೆ ಸುಮಾರು 500 ಮಂದಿ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರು ವಿವಿ (Mangaluru university) ಆಡಳಿತ ಸೌಧಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು, ಪೊಲೀಸರು ಅವರನ್ನು ತಡೆದಿದ್ದಾರೆ. ಈ ವೇಳೆ ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್‌ ಗಳನ್ನು ತಳ್ಳಿ ಒಳಗೆ ನುಗ್ಗಲು ಯತ್ನಿಸಿದ್ದಾರೆ.ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಸಮಸ್ಯೆಯಾಗುತ್ತಿರುವುದು, ಮೌಲ್ಯಮಾಪನ ವನ್ನು ಸೂಕ್ತ ಸಮಯದಲ್ಲಿ ನಡೆಸದಿರುವುದು. ಇವೆಲ್ಲ ಸಮಸ್ಯೆಗಳು ಒಂದು ಕಡೆಯಾದರೆ, ಎನ್‌ಇಪಿ ಜಾರಿಯಾದ ನಂತರ ಮೊದಲನೇ ವರ್ಷಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳು ಪ್ರಸ್ತುತ ದ್ವಿತೀಯ ವರ್ಷದಲ್ಲಿ ಇದ್ದರೂ ಕೂಡ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ ನ ಮೌಲ್ಯಮಾಪನವನ್ನು ನಡೆಸಿ ಫಲಿತಾಂಶವನ್ನು ಈವರೆಗೂ ನೀಡದೆ ಮಂಗಳೂರು ವಿವಿ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿದೆ. ಈ ಎಲ್ಲಾ ಕಾರಣದಿಂದ ವಿದ್ಯಾರ್ಥಿಗಳು ಸಿಡಿದೆದ್ದು, ಪ್ರತಿಭಟನೆ ನಡೆಸಿದ್ದರು. ಇದೀಗ ಎಬಿವಿಪಿ ಕಾರ್ಯಕರ್ತರು ವಿವಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ವಿ.ವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ಮತ್ತು ಕುಲಪತಿ ಪಿ.ಎಸ್ ಯಡಪಡಿತ್ತಾಯ ಆಗಮಿಸಿದ್ದು, ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.ಕುಲಸಚಿವರೇ ಇದಕ್ಕೆಲ್ಲ ಕಾರಣ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಇದರಿಂದ ಭಾವುಕರಾದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್. ಧರ್ಮ,ವಿದ್ಯಾರ್ಥಿಗಳು ವಾಸ್ತವ ಅರ್ಥಮಾಡಿಕೊಂಡಿಲ್ಲ.ಒಂದು ದಿನ ಸಿಎಲ್ ಹಾಕದೆ ನಮ್ಮ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.ಯುಸಿಎಂಎಸ್ ನದ್ದೇ ನಮಗೆ ಸಮಸ್ಯೆ ಆಗಿರೋದು. ಸರ್ವರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ.ಸರಕಾರದ ವಿರುದ್ಧ ನಾನು ಮಾತನಾಡುತ್ತಿಲ್ಲ, ವ್ಯವಸ್ಥೆ ವಿರುದ್ಧ ಮಾತನಾಡುತ್ತಿದ್ದೇನೆ.ಜನವರಿ 25ರ ಒಳಗಡೆ ಫಲಿತಾಂಶ ಪ್ರಕಟಣೆಗೆ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂಬ ಭರವಸೆ ನೀಡಬಲ್ಲೆ ಎಂದರು. ಪರೀಕ್ಷಾಂಗ ಕುಲಸಚಿವರ ಭರವಸೆಯ ಮೇರೆಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯನ್ನು ನಿಲ್ಲಿಸಿದ್ದಾರೆ.

ಇದನ್ನೂ ಓದಿ : Cooperative Society of Udupi : ಉಡುಪಿಯ ಸಹಕಾರ ಸಂಘದಿಂದ ಗ್ರಾಹಕರಿಗೆ ನೂರಾರು ಕೋಟಿ ವಂಚನೆ : ಕಛೇರಿ ಮುಂದೆ ಜಮಾಯಿಸಿದ ಗ್ರಾಹಕರು

(Mangaluru university) ABVP activists have expressed their outrage against the delay in the examination results, and the ABVP activists have protested against the delay in Mangalore VV results. About 500 ABVP workers laid siege to the administrative building of the university in Konaje, Mangalore and staged a massive protest.

Comments are closed.