ಮಂಗಳೂರು : ಕಳೆದ 50 ವರ್ಷಗಳಿಂದಲೂ ಯಕ್ಷರಂಗದಲ್ಲಿ ಭಾಗವತರಾಗಿ ಮಿಂಚಿದ್ದ ತೆಂಕು ತಿಟ್ಟಿನ ಗಾನಗಂಧರ್ವ ಭಾಗವತ ಪದ್ಯಾಣ ಗಣಪತಿ ಭಟ್ ಅವರು ವಿಧಿವಶರಾಗಿದ್ದಾರೆ.
ಪದ್ಯಾಣ ಗಣಪತಿ ಭಟ್ ಅವರಿಗೆ 66 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದಲೂ ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಂಗಳೂರು : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ
ಸುರತ್ಕಲ್ ಮೇಳದಲ್ಲಿ ಸುಧೀರ್ಘ 26 ವರ್ಷಗಳ ಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೇ ತೆಂಕು ತಿಟ್ಟಿನ ಹೊಸನಗರ ಮೇಳ, ಎಡನೀರು ಮೇಳ, ಹನುಮಗಿರಿ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಪದ್ಯಾಣ ಗಣಪತಿ ಭಟ್ ಅವರು ಭಾಗವತರಾಗಿ ತೆಂಕಿನಲ್ಲಿ ಪದ್ಯಾಣ ಶೈಲಿಯನ್ನೇ ಹುಟ್ಟು ಹಾಕಿದ ಮೇರು ಭಾಗವತರಾಗಿದ್ದಾರೆ.
ಹಿರಿಯ ಯಕ್ಷಗಾಲ ಕಲಾವಿದರ ಅಗಲಿಕೆ ಇದೀಗ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಕಲಾವಿದರು ಹಿರಿಯ ಭಾಗವತ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ; Mangalore Misfires : ಶೂಟೌಟ್‌ಗೆ ಮಗ ಸಾವು, ತಂದೆ ರಾಜೇಶ್ ಪ್ರಭು ಅರೆಸ್ಟ್
(Ganagandharva Bhagavata Padyana Ganapati Bhat passes away)