Maruti swift Accident : ಯಡ್ತಾಡಿಯಲ್ಲಿ ಮಾರುತಿ ಸ್ವಿಫ್ಟ್‌ ಕಾರು- ರಿಕ್ಷಾ – ಬೈಕ್‌ ಭೀಕರ ಅಪಘಾತ : ಓರ್ವ ಸಾವು, ಇಬ್ಬರು ಗಂಭೀರ

ಬ್ರಹ್ಮಾವರ : ಮಾರುತಿ ಸ್ವಿಫ್ಟ್‌ ಕಾರು (Maruti swift Accident), ಮೀನು ಸಾಗಾಟದ ರಿಕ್ಷಾ ಹಾಗೂ ಬೈಕ್‌ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಮೀನು ಮಾರಾಟಗಾರ ರೋರ್ವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಯಡ್ತಾಡಿಯ ಮಲಸಾವರಿ ದೇವಸ್ಥಾನದ ಬಳಿಯಲ್ಲಿ ನಡೆದಿದೆ.

ಬ್ರಹ್ಮಾವರ ತಾಲೂಕಿನ ಅಚ್ಲಾಡಿಯ ಮಾನಂಬಳ್ಳಿ ನಿವಾಸಿ ಸುರೇಶ್‌ ಎಂಬವರೇ ಮೃತ ದುರ್ದೈವಿ. ರಿಕ್ಷಾದಲ್ಲಿದ್ದ ರಾಜು ಹಾಗೂ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸಾಯಿಬ್ರಕಟ್ಟೆಯ ಕಡೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್‌ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ, ನಂತರ ಚಾಲಕನ ನಿಯಂತ್ರಣ ತಪ್ಪಿ ಕಾರು ಮಲ್ಪೆಯಿಂದ ಮೀನು ತುಂಬಿಸಿಕೊಂಡು ಬರುತ್ತಿದ್ದ ಅಪೆ ರಿಕ್ಷಾಕ್ಕೆ ಢಿಕ್ಕಿಯಾಗಿದೆ.

ಸ್ಥಳದಲ್ಲಿಯೇ ಮೀನುಗಾರ ಸುರೇಶ್‌ ಸಾವನ್ನಪ್ಪಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಲಾರಿ ಮತ್ತು ಟ್ಯಾಂಕರ್‌ ನಡುವೆ ಭೀಕರ ಅಪಘಾತ : ನಾಲ್ವರ ದುರ್ಮರಣ

ಚಿತ್ರದುರ್ಗ : ಈರುಳ್ಳಿ ಸಾಗಿಸುತ್ತಿದ್ದ ಲಾರಿ ಹಾಗೂ ಟ್ಯಾಂಕರ್‌ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Onion Lorry Accident) ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರಾಯಚೂರು ಮೂಲದ ಹುಲುಗಪ್ಪ, ರೋಣ ಮೂಲದ ಚಾಲಕ ಶರಣಪ್ಪ ಎಂಬವರೇ ಮೃತ ದುರ್ದೈವಿಗಳು. ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಈರುಳ್ಳಿ ಸಾಗಾಟ ಮಾಡುತ್ತಿತ್ತು. ಈ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಗದಗದಿಂದ ಬೆಂಗಳೂರಿಗೆ ಹೊರಟಿದ್ದ ಈರುಳ್ಳಿ ತುಂಬಿದ್ದ ಲಾರಿ ಪಂಕ್ಚರ್‌ ಆಗಿತ್ತು. ಈ ವೇಳೆಯಲ್ಲಿ ಲಾರಿಯನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಪಂಕ್ಚರ್‌ ಹಾಕುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಟ್ಯಾಂಕರ್‌ ಲಾರಿಗೆ ಢಿಕ್ಕಿ ಹೊಡೆದಿದೆ. ಇದರಿಂದಾಗಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಕೆಲ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ : Deltaplus:ಕೊರೋನಾ ಎರಡನೇ ಅಲೆ ನಡುವೆಯೇ ಡೆಲ್ಟಾ ಪ್ಲಸ್ ಭೀತಿ…! ಅತ್ಯಂತ ಅಪಾಯಕಾರಿಯಂತೆ ಈ ವೈರಸ್….!!

ಇದನ್ನೂ ಓದಿ : ಖಾಸಗಿ ವಿಡಿಯೋ ಪೋಸ್ಟ್‌ : ಖ್ಯಾತ ನಟಿ ಹಾಗೂ ಸ್ನೇಹಿತ ಅರೆಸ್ಟ್‌

ಇದನ್ನೂ ಓದಿ : Jawahar Navodaya Vidyalaya : ಚಿಕ್ಕಮಗಳೂರಿನ ವಸತಿ ಶಾಲೆಯ 40 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

( Maruti swift car auto and bike accident one death two injured in yedthadi near Brahamavar)

Comments are closed.