ಬಸ್ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ : ನಿಯಮ ಉಲ್ಲಂಘಿಸಿದ್ರೆ ಬಸ್ ಪರವಾನಿಗೆ ರದ್ದು : ಉಡುಪಿ ಡಿಸಿ

ಉಡುಪಿ : ಕೊರೊನಾ ಎರಡನೇ ಅಲೆಯ ತೀವ್ರತೆ ದಿನ ಕಳೆದಂತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರುತ್ತಿದ್ದು, ಇದೀಗ ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ. ಒಂದೊಮ್ಮೆ ನಿಯಮ ಉಲ್ಲಂಘಿಸಿದ್ರೆ ಬಸ್ ಪರವಾನಿಗೆಯನ್ನೇ ರದ್ದುಗೊಳಿಸುವುದಾಗಿ ಎಚ್ಚರಿಸಿದೆ.

ಕೊರೊನಾ ಡೇಜಂರ್ ಜಿಲ್ಲೆಗಳ ಸಾಲಿನಲ್ಲಿರುವ ಉಡುಪಿ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಕೊರೊನಾ ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದಿರೋ ಉಡುಪಿ ಜಿಲ್ಲಾಡಳಿತ ಇದೀಗ ಬಸ್ ಪ್ರಮಾಣಿಕರಿಗೆ ಬಿಸಿ ಮುಟ್ಟಿಸಿದ್ದಾರೆ. ಬಸ್ ಸಂಚಾರದ ವೇಳೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಸಿಬ್ಬಂದಿ ಮಾಸ್ಕ್ ಧರಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸೂಚನೆ ನೀಡಿದ್ದಾರೆ.

ಬಸ್ಸುಗಳಲ್ಲಿ ಚಾಲಕ, ನಿರ್ವಾಹಕರು ಹಾಗೂ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಮಾಸ್ಕ್ ಧರಿಸದೇ ಇರುವ ಪ್ರಯಾಣಿಕರಿಗೆ ಬಸ್ ಗಳಲ್ಲಿ ಪ್ರವೇಶ ನೀಡಬಾರದಾಗಿಯೂ ಹಾಗೂ ಮಾಸ್ಕ್ ಧರಿಸದಿರುವುದು ಕಂಡು ಬಂದಲ್ಲಿ ಬಸ್ಸುಗಳ ಪರವಾನಿಗೆಯನ್ನು ರದ್ದು ಮಾಡಲು ಹಾಗೂ ಸಂಬಂಧಪಟ್ಟ ಬಸ್ಸಿನ ಮಾಲಿಕರ ಮೇಲೆ ಪ್ರಕರಣ ದಾಖಲಿಸಲು ಕ್ರಮ ವಹಿಸಬೇಕು.

https://kannada.newsnext.live/6-months-imprisonment-for-not-wearing-mask-sheriffs-enforcer/

ಒಂದೊಮ್ಮೆ ಅನಿವಾರ್ಯ ಎಂದು ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ಪಾಲನೆ ಮಾಡುವಂತೆ ಕೆಎಸ್ಆರ್ ಟಿಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಕರು ಹಾಗೂ ಆರ್ ಟಿಓ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

https://kannada.newsnext.live/dk-shivakumar-contest-next-election-mangalore-north-constituency/

Comments are closed.