ಮೆಹಂದಿ ಕಾರ್ಯಕ್ರಮ ಆಯೋಜಿಸಿದ್ರೆ ಕ್ರಿಮಿನಲ್ ಕೇಸ್ : ಉಡುಪಿ ಜಿಲ್ಲಾಧಿಕಾರಿ ವಾರ್ನಿಂಗ್

ಉಡುಪಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಯಲ್ಲಿದೆ. ಈ ವೇಳೆಯಲ್ಲಿ ಮೆಹಂದಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ರೆ ಅಂತಹವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಎಚ್ಚರಿಕೆಯನ್ನು ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೆಹಂದಿ ಕಾರ್ಯಕ್ರಮಕ್ಕೆ ನಿರ್ಬಂಧವನ್ನು ಹೇರಲಾಗಿದೆ. ಅಲ್ಲದೇ ಮಹೆಂದಿ ಕಾರ್ಯಕ್ರಮವನ್ನು ಆಯೋಜನೆ ಮಾಡಲು ಯಾರಿಗೂ ಅನುಮತಿಯನ್ನು ನೀಡಿಲ್ಲ. ಕದ್ದು ಮುಚ್ಚಿ ಮೆಹಂದಿ ಆಯೋಜಿಸಿದ್ರೆ ಆಯೋಜಕರ ವಿರುದ್ದ ಮಾತ್ರವಲ್ಲದೇ ಪೋಟೋ ಗ್ರಾಫರ್ ಹಾಗೂ ವಿಡಿಯೋ ಗ್ರಾಫರ್ ವಿರುದ್ದವೂ ಕ್ರಿಮಿನಲ್ ಕೇಸ್ ದಾಖಲು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮಗಳಿಂದಾಗಿಯೇ ಉಡುಪಿ ಜಿಲ್ಲೆ ಕೊರೊನಾ ಸೋಂಕು ನಿಯಂತ್ರಣ ಮಾಡಿತ್ತು. ಆದ್ರೀಗ ಎರಡನೇ ಅಲೆಯ ಸಂದರ್ಭದಲ್ಲಿ ತಡವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡುತ್ತಿದೆ. ನಿನ್ನೆಯಷ್ಟೇ ಕೊರೊನಾ ಸೋಂಕಿತರಿಗೆ ವಾರ್ನಿಂಗ್ ನೀಡಿದ್ದ ಜಿಲ್ಲಾಧಿಕಾರಿಗಳು ಇದೀಗ ಮೆಹಂದಿ ಆಯೋಜಕರಿಗೂ ಬಿಸಿ ಮುಟ್ಟಿಸಿದ್ದಾರೆ.

https://kannada.newsnext.live/corona-covid-19-mother-on-oxygen-concentrator-support-viral-photo/

Comments are closed.