ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನರ ರಾಜರು: ವಿವಾದದ ಕಿಡಿ ಹೊತ್ತಿಸಿದ ಮಿಥುನ್‌ ರೈ

ಮಂಗಳೂರು: (Mithun Rai’s Controversial Statement) ಇನ್ನೇನು ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಈ ನಡುವೆ ರಾಜಕಾರಣಿಗಳ ಮಧ್ಯೆಯೇ ವಿವಾದಗಳು ನಡೆಯುತ್ತಿದ್ದು, ವಿವಾದಾತ್ಮಕ ಹೇಳಿಕೆಗಳ ಮೂಲಕ ಹಲವರು ಸುದ್ದಿಯಲ್ಲಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಪ್ತ ಮಿಥುನ್‌ ರೈ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಮಿಥುನ್‌ ರೈ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದೆ.

ಹೌದು ಜಿಲ್ಲೆಯ ಮೂಡುಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮ ನೆರವೇರಿದ್ದು, ಈ ವೇಳೆ ಉಡುಪಿ ಮಠಕ್ಕೆ ಜಾಗ ನೀಡಿದ್ದು ಮುಸಲ್ಮಾನ ರಾಜರು ಎಂದು ಹೇಳಿದ್ದು, ವಿವಾದದ ಕಿಡಿಯನ್ನು ಮೈಮೇಲೆ ತಂದುಕೊಂಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಮಿಥುನ್‌ ರೈ ಅವರ ಹೇಳಿಕೆ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮಿಥುನ್‌ ರೈ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಪತ್ರಿಕೆಗಳಲ್ಲಿ ಬಂದ ವರದಿ ನೋಡಿ ನಾನು ಹೇಳಿಕೆ ನೀಡಿದ್ದೇನೆ. ನಾನು ಸೌಹಾರ್ದಯುತ ಹೇಳಿಕೆಯನ್ನೇ ನೀಡಿದ್ದೇನೆ ಎಂದಿದ್ದಾರೆ.

ಇದಲ್ಲದೇ ಇವರ ಹೇಳಿಕೆಗೆ ಹಿಂದೂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಹೇಳಿಕೆ ಸತ್ಯಕ್ಕೆ ದೂರವಾದ ಮಾತು ಎಂದಿದ್ದಾರೆ. ಶ್ರೀ ಕೃಷ್ಣ ಮಠಕ್ಕೆ ಎಂಟು ನೂರು ವರ್ಷಗಳ ಇತಿಹಾಸವಿದೆ. ಹಿಂದೂಗಳಿಗೆ ಅವಮಾನವಾಗುವಂತ ಹೇಳಿಕೆ ಇವರದ್ದು ಎಂದು ಪ್ರಮೋದ್‌ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಭೂಮಿ ಕೊಟ್ಟ ಬಗ್ಗೆ ಉಲ್ಲೇಖ ಇದೆ. ಮುಂದೆ ಆ ಭೂಮಿಯೆ ಕೃಷ್ಣ ಮಠಕ್ಕೆ ಬಳಕೆಯಾಗಿದೆ. ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ ಎಂದು ಉಡುಪಿ ಶಾಸಕ ಕೆ ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಇರುವ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು ಎಂದು ಹೇಳಲಾಗುತ್ತೆ. ಶೋಕಮಾತಾ ಚರ್ಚ್ ಕೃಷ್ಣ ಮಠದವರು ಕೊಟ್ಟ ಲೀಸ್ ಭೂಮಿಯಲ್ಲಿದೆ.

ಕ್ರಿಶ್ಚಿಯನ್ ಸಮುದಾಯಕ್ಕೆ ಚರ್ಚ್ ಕಟ್ಟಲು ಕೃಷ್ಣಾಪುರ ಮಠ ಭೂಮಿ ಕೊಟ್ಟಿದೆ. ಹಾಜಿ ಅಬ್ದುಲ್ಲಾ ಸಾಹೇಬರು ಭಕ್ತರಾಗಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ ಉಲ್ಲೇಖವಿದೆ. ಮಿಥುನ್ ರೈಗಳು ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ಗೊತ್ತಿಲ್ಲ. ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದರು. ಮಿಥುನ್ ರೈ ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ. ಮಥುರದಲ್ಲಿ ಕೃಷ್ಣ ಮಂದಿರ, ಕಾಶಿ ಬಗ್ಗೆ ದೇಶದ ಜನತೆಗೆ ಗೊತ್ತಿದೆ. ಈಗ ಒಂದೊಂದೇ ಕ್ಷೇತ್ರಗಳು ಮುಕ್ತವಾಗುತ್ತಿದೆ ಎಂದು ರಘುಪತಿ ಭಟ್ ತಿರುಗೇಟು ನೀಡಿದರು.

ಇದನ್ನೂ ಓದಿ : NariShakti for new India: ಅಂತರರಾಷ್ಟ್ರೀಯ ಮಹಿಳಾ ದಿನದಂದು ‘ನಾರಿ ಶಕ್ತಿ’ ಸಾಧನೆಗಳಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಮಿಥುನ್‌ ರೈ ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಕೆಪಿಸಿಸಿ ಅಧ್ಯಕ್ಚ ಡಿಕೆಶಿ ಅವರು ಆಪ್ತರಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಬಿಜೆಪಿ ರಾಜ್ಯ ಘಟಕಾಧ್ಯಕ್ಷ ನಳೀನ್‌ ಕುಮಾರ್‌ ವಿರುದ್ದ ಸ್ಪರ್ಧಿಸಿ ಸೋಲನುಭವಿಸಿದ್ದರು. ನಂತರ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಿದ್ದರು.

Mithun Rai’s Controversial Statement: Muslim kings gave land to Udupi Mutt: Mithun Rai sparked controversy

Comments are closed.