Monsoon Enter Karnataka : ಮುಂಗಾರು ಮಳೆ ಆಗಮನ : ಉಡುಪಿ, ಮಂಗಳೂರಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು : (Monsoon Enter Karnataka) ರಾಜ್ಯದಲ್ಲಿ ಮುಂಗಾರು ಪ್ರವೇಶವಾಗುತ್ತಿದ್ದಂತೆ ಭಾರೀ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಅಷ್ಟೇ ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ಜನರು ಮಳೆಯಿಂದ ಆಗುವ ಅನಾಹುತಗಳ ಎಚ್ಚರಿಕೆವಹಿಸಬೇಕಾಗಿದೆ.

ಇಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 13 ಮತ್ತು 14 ರಂದು ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶನಿವಾರ ರಾಜ್ಯ ಪ್ರವೇಶಿಸಿದ ಮುಂಗಾರು ಮಳೆ ಭಾನುವಾರದ ವೇಳೆಗೆ ರಾಜ್ಯದ ಅರ್ಧದಷ್ಟು ಭಾಗಕ್ಕೆ ವ್ಯಾಪಿಸಿದೆ. ಶನಿವಾರ ಮಡಿಕೇರಿ ಮತ್ತು ಕಾರವಾರದಲ್ಲಿ ರಾಜ್ಯಕ್ಕೆ ಪ್ರವೇಶಿಸಿದ ಮುಂಗಾರು ಮಳೆ, ಭಾನುವಾರ ಶಿವಮೊಗ್ಗ ಜಿಲ್ಲೆಯನ್ನು ವ್ಯಾಪಿಸಿದೆ. ಬೆಳಗಾವಿ, ಗದಗ, ಹೊನ್ನಾವರ, ಕಾರವಾರ, ಮಂಗಳೂರಿನಲ್ಲಿ ಭಾರೀ ಮಳೆಯಾಗಿದೆ.

ರಾಜ್ಯದ ಒಳ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ. 13ರಿಂದ 15ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮೂರು ದಿನಗಳ ಹಳದಿ ಅಲರ್ಟ್ ಘೋಷಿಸಲಾಗಿದೆ.

ಭಾನುವಾರ ಮುಂಜಾನೆ 5.30ರ ಸುಮಾರಿಗೆ ಬಿಪರ್‌ಜೋಯ್‌ ಚಂಡಮಾರುತ ತೀವ್ರ ಚಂಡಮಾರುತವಾಗಿ ಮಾರ್ಪಟ್ಟಿದೆ. ಆದರೆ, ಪ್ರಸ್ತುತ ಮುನ್ಸೂಚನೆಯ ಪ್ರಕಾರ ಇದು ಗುಜರಾತ್‌ಗೆ ಅಪ್ಪಳಿಸದೇ ಇರಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.

ಇದನ್ನೂ ಓದಿ : Shakti Yojana : ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ರಾಜ್ಯದಾದ್ಯಂತ ಶಕ್ತಿಯೋಜನೆ ಲೋಕಾರ್ಪಣೆ

ಮುಂಬೈನ ಮರೈನ್ ಡ್ರೈವ್‌ನಲ್ಲಿ ಶನಿವಾರ ಅರಬ್ಬಿ ಸಮುದ್ರದಲ್ಲಿ ಬಿಪೋರ್‌ಜಾಯ್ ಚಂಡಮಾರುತದ ರಚನೆಯಿಂದಾಗಿ ಅಲೆಗಳು ಹೆಚ್ಚಿನ ಉಬ್ಬರವಿಳಿತದ ಸಮಯದಲ್ಲಿ ನಗರದ ಜಲಾಭಿಮುಖವನ್ನು ಹೊಡೆದವು. ಚಂಡಮಾರುತವು ಪೋರಬಂದರ್ ಕರಾವಳಿಯಿಂದ 200 ರಿಂದ 300 ಕಿಮೀ ದೂರದಲ್ಲಿ ಹಾದುಹೋಗುವ ಸಾಧ್ಯತೆಯಿರುವುದರಿಂದ ಮುಂದಿನ ಐದು ದಿನಗಳಲ್ಲಿ ಗುಜರಾತ್‌ನಲ್ಲಿ ಗುಡುಗು ಮತ್ತು ಬಲವಾದ ಗಾಳಿ ಬೀಸಲಿದೆ.

Monsoon Enter Karnataka : Monsoon Rain Arrival : Heavy rain in Udupi, Mangalore, Yellow Alert

Comments are closed.