Moral Police Giri: ಮಂಗಳೂರಿನಲ್ಲಿ ಹೋಳಿ ಆಚರಣೆ : ಭಜರಂಗದಳ ಕಾರ್ಯಕರ್ತರಿಂದ ದಾಳಿ

ಮಂಗಳೂರು : (Moral Police Giri) ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ನಗರದ ಮರೋಳಿ ಎಂಬಲ್ಲಿ ನಡೆದಿದೆ. ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ ಎಂದು ವರದಿಯಾಗಿದೆ.

ರಂಗ್ ದೇ ಬರ್ಸಾ ಎಂಬ ಹೆಸರಲ್ಲಿ ಹೋಳಿ ಹಬ್ಬದ ಆಚರಣೆ ಮರೋಳಿಯಲ್ಲಿ ನಡೆದಿದ್ದು, ಈ ವೇಳೆ ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದರು. ಈ ಸಂದರ್ಭ ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ಕಾರ್ಯಕರ್ತರು ಕಾರ್ಯಕ್ರಮದ ಮೇಲೆ ದಾಳಿ ನಡೆಸಿ ಅಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಅನ್ನು ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ.

ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಭಜರಂಗದಳದ ಕಾರ್ಯಕರ್ತರು ಆಯೋಜಕರು ಮತ್ತು ಕೆಲವರ ಮೇಲೆ ಹಲ್ಲೆಗೂ ಯತ್ನಿಸಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಕೆಲವು ಗಾಯಗೊಂಡಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಭಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಮಂಗಳೂರಿನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನೈತಿಕ ಪೊಲೀಸ್‌ ಗಿರಿ ಹೆಚ್ಚುತ್ತಿದ್ದು, ಅನೇಕರು ಜೈಲು ಪಾಲಾಗಿದ್ದಾರೆ. ಧರ್ಮ ಧರ್ಮಗಳ ಮಧ್ಯೆ ಧರ್ಮ ದಂಗಲ್‌ ಬುಗಿಲೆದ್ದ ವೇಳೆಯೇ ನೈತಿಕ ಪೊಲೀಸ್‌ ಗಿರಿ ಕೂಡ ತಲೆಯೆತ್ತಿದ್ದು, ಈ ವರೆಗೆ ಪೊಲೀಸರು ಅನೇಕರನ್ನು ರಕ್ಷಿಸಿದ್ದಾರೆ. ಅನ್ಯಕೋಮಿನ ಎಂದು ಹೇಳಿ ಅವರ ಮೇಲೆ ಭಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಲಾಗುತ್ತಿದ್ದು, ಈವರೆಗೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಆರೋಗ್ಯ ಕರ್ನಾಟಕದತ್ತ ಮಹತ್ವದ ಹೆಜ್ಜೆ : ನಾಳೆ ರಾಜ್ಯದಲ್ಲಿ ವಿವಿಧ ಆರೋಗ್ಯ ಕಾರ್ಯಕ್ರಮಗಳಿಗೆ ಚಾಲನೆ

ಇದನ್ನೂ ಓದಿ : Toy train service: ಪುಟಾಣಿ ಎಕ್ಸ್‌ಪ್ರೆಸ್: ಬೆಂಗಳೂರಿನಲ್ಲಿ ಟಾಯ್ ಟ್ರೈನ್ ಸೇವೆಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

ಇದನ್ನೂ ಓದಿ : NP based syllabus: 3 ರಿಂದ 6ನೇ ತರಗತಿಯ ಎನ್‌ ಪಿ ಆಧಾರಿತ ಪಠ್ಯಕ್ರಮ ಬಿಡುಗಡೆ

Moral Police Giri: Holi celebrations in Mangalore: Attack by Bajrang Dal activists

Comments are closed.