ಕಟೀಲು ದೇವಸ್ಥಾನದ ಎದುರು ಹೊತ್ತಿ ಉರಿದ ಬಸ್‌

ಮಂಗಳೂರು : ( Bus Fire Kateel) ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಎಂಆರ್‌ಪಿಎಲ್‌ ಕಂಪೆನಿಗೆ ಸೇರಿದ ಬಸ್‌ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ ಚಾಲಕ ಸೇರಿ ಮೂವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಸುರತ್ಕಲ್‌ ಸಮೀಪದ ಓಎಂಪಿಎಲ್‌ ಕಂಪೆನಿಗೆ ಸೇರಿದ ಬಸ್ಸು ಕಟೀಲು ರೂಟ್‌ನಲ್ಲಿ ಸಿಬ್ಬಂದಿಗಳನ್ನು ಬಿಟ್ಟು ಇಂದು ಮಧ್ಯಾಹ್ನ 2.45ರ ಸುಮಾರಿಗೆ ಬಳಿಯಲ್ಲಿರುವ ಓಎಂಪಿಎಲ್‌ ಗೆ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ಸು, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಚಲಿಸುತ್ತಿದ್ದ ವೇಳೆಯಲ್ಲಿ ಒಮ್ಮಿಂದೊಮ್ಮೆಲೆ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನಲ್ಲಿದ್ದ ಚಾಲಕ ಹಾಗೂ ಇನ್ನೂ ಇಬ್ಬರು ಬಸ್ಸಿನಿಂದ ಹೊರಗೆ ಜಿಗಿದಿದ್ದಾರೆ.

ಮೇಲ್ನೋಟಕ್ಕೆ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಬಸ್ಸಿನಲ್ಲಿರುವ ಬ್ಯಾಟರಿ ಸ್ಪೋಟಗೊಂಡು ಘಟನೆ ಸಂಭವಿಸಿರುವ ಸಾಧ್ಯತೆಯಿದೆ. ಬಸ್ಸಿನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಥಳೀಯರು ಟ್ಯಾಂಕರ್‌ ಮೂಲಕ ನೀರನ್ನು ತಂದು ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ : ಅಕ್ರಮ ಆಸ್ತಿ ಪ್ರಕರಣ : ಡಿಕೆ ಶಿವಕುಮಾರ್ ವಿರುದ್ದ ಸಿಬಿಐ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್

ಇದನ್ನೂ ಓದಿ : ಸಿಎಂ ಆಯ್ಕೆ ಆಗಿಲ್ಲ, ಊಹಾಪೋಹಗಳಿಗೆ ಕಿವಿಗೊಡಬೇಡಿ : ಸುರ್ಜೇವಾಲಾ‌ ಸ್ಪಷ್ಟನೆ

ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇನ್ನುಳಿದಂತೆ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇನ್ನು ಮೃತ ಕುಟುಂಬದವರ ಅಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಈ ದುರ್ಘಟನೆಯುಈ ಅವಘಡದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಅಪರಾಧ ತನಿಖಾ ಇಲಾಖೆ ಘಟನೆಯ ತನಿಖೆಯನ್ನು ಚುರುಕುಗೊಳಿಸಿದೆ. ವರದಿಗಳ ಪ್ರಕಾರ, ರಾಜ್ಯ ಸರಕಾರವು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ ನಂತರ ಕೋಲ್ಕತ್ತಾದಿಂದ ಅಪರಾಧ ತನಿಖಾ ವಿಭಾಗದ ತಂಡವು ಮಂಗಳವಾರ ರಾತ್ರಿ 9.45ಕ್ಕೆ ಸ್ಥಳಕ್ಕೆ ತಲುಪಿ ವಿಧಿವಿಜ್ಞಾನ ತಜ್ಞರ ಸಹಾಯದಿಂದ ತನಿಖೆ ಆರಂಭಿಸಿದೆ.

ಪೂರ್ವ ಮೇದಿನಿಪುರ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥ್‌ ಕೆ, ಇಲ್ಲಿಯವರೆಗೆ, 9 ಮೃತದೇಹಗಳು ಪತ್ತೆಯಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಕೋಲ್ಕತ್ತಾದ ಆಸ್ಪತ್ತೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಾಹ್ನದ ವೇಳೆಯಲ್ಲಿ ಇದ್ದಕ್ಕಿದ್ದಂತೆ ಭಾರೀ ಸ್ಫೋಟವೊಂದು ಕೇಳಿ ಬಂದಿತ್ತು. ಕಾರ್ಖಾನೆಯ ಮೇಲ್ಛಾವಣಿ ಹಾರಿ ಹೋಗಿರುವುದನ್ನು ನೋಡಿದ್ದಾರೆ. ಜನರ ಮೃತ ದೇಹಗಳು ಛಿದ್ರವಾಗಿ ಬಿದ್ದಿವೆ. ಕೆಲವರ ದೇಹಗಳು ರಸ್ತೆಯ್ಲಿ ಬಿದ್ದಿವೆ ಅದರಲ್ಲಿ ಹಲವರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದಾರೆ. ಸ್ಥಳಕ್ಕೆ ಅಗಮಿಸಿದ ಪೊಲೀಸ್‌ ಆಧಿಕಾರಿಗಳ ಮಾಹಿತಿ ಪ್ರಕಾರ, ಮೃತರು ಮತ್ತು ಗಾಯಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನುಳಿದಂತೆ ಸ್ಫೋಟ ಸಂಭವಿಸಿದ ಸ್ಥಳವು ಒಡಿಶಾದ ಗಡಿ ಪ್ರದೇಶದಲ್ಲಿ ಇರುತ್ತದೆ.

MRPL Bus Caught Fire near Kateel Temple

Comments are closed.