Kundapur : ಒತ್ತಿನೆಣೆಯಲ್ಲಿ ಗುಡ್ಡ ಕುಸಿತ, ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಅಡ್ಡಿ

ಬೈಂದೂರು : ಭಾರೀ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

ಉಡುಪಿ ಜಿಲ್ಲೆಯ ಬೈಂದೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರ ಒತ್ತಿನೆಣೆಯ ಬಳಿಯಲ್ಲಿ ಚತುಷ್ಪಥ ಕಾಮಗಾರಿ ವೇಳೆ ಗುಡ್ಡ ಕೊರೆಯ ಲಾಗಿತ್ತು. ಆದರೆ ಕಳೆದ ಮೂರ್ನಾಲ್ಕು ದಿನಗಳ ಕಾಲ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದೆ. ಹೆದ್ದಾರಿ ಬಳಿ ಗುಡ್ಡ ಜರಿದ ಹಿನ್ನಲೆ ಯಲ್ಲಿ ರಸ್ತೆ ಸಂಚಾರಕ್ಕೆ ಕೊಂಚ ಅಡ್ಡಿ ಯಾಗಿದೆ. ಇದೀಗ ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವು‌ ಮಾಡುವ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.

ಐಆರ್ ಬಿ ಕಂಪೆನಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಯನ್ನು ನಡೆಸಿತ್ತು. ಕಳೆದ ಮೂರು ವರ್ಷಗಳಿಂದಲೂ ನಿರಂತರವಾಗಿ ಗುಡ್ಡ ಕುಸಿತ ಉಂಟಾಗುತ್ತಿದೆ. ಈ ಬಾರಿಯೂ ಗುಡ್ಡ ಕುಸಿತವಾಗಿದ್ದ ವಾಹನ ಸವಾರ ರಿಗೆ ಆತಂಕ ಶುರುವಾಗಿದೆ.

Comments are closed.