ಸಂತೆಕಟ್ಟೆಯಲ್ಲಿ ಓವರ್‌ ಪಾಸ್‌ ನಿರ್ಮಾಣಕ್ಕೆ ಶಿಲನ್ಯಾಸ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಸಂತೆಕಟ್ಟೆಯಲ್ಲಿ (national highway santhekatte) ವಾಹನ ದಟ್ಟಣೆ, ಅಪಘಾತವನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ರೂ ವೆಚ್ಚದಲ್ಲಿ ಓವರ್‌ ಪಾಸ್‌ ನಿರ್ಮಾಣ ಮಾಡಲಾಗುತ್ತಿದ್ದು, ಇಂದು ಶೋಭಾ ಕರಂದ್ಲಾಜೆ ಅವರು ಓವರ್‌ ಪಾಸ್‌ ಗೆ ಶಿಲನ್ಯಾಸ ಕಾರ್ಯಕ್ರಮ ನೆರವೇರಿಸಿದ್ದಾರೆ.

ನಗರದ ಸಂತೆಕಟ್ಟೆ ಜಂಕ್ಷನ್‌ ನಲ್ಲಿ ಅತ್ಯಂತ ತ್ವರಿತಗತಿಯಲ್ಲಿ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಕಾರ್ಯಕ್ರಮವನ್ನು ನೆರವೇರಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂತೆಕಟ್ಟೆ ಜಂಕ್ಷನ್‌ ಅತ್ಯಂತ ವಾಹನ ದಟ್ಟಣೆಯಿಂದ ಕೂಡಿದ್ದು, ಪ್ರತಿ ದಿನ 4500 ಕ್ಕೂ ಹೆಚ್ಚು ವಾಹನಗಳು ಇಲ್ಲಿ ಸಂಚರಿಸುತ್ತವೆ. ಇದು ಪ್ರಮುಖ ಬ್ಲಾಕ್‌ ಸ್ಪಾಟ್ ಆಗಿ ಗುರುತಿಸಲಾಗಿದೆ. ಈ ಭಾಗದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಓವರ್‌ ಪಾಸ್‌ ನಿರ್ಮಾಣ ಅತೀ ಅವಶ್ಯಕವಾಗಿದ್ದು, ಹಲವು ವರ್ಷಗಳಿಂದ ಇದು ಸಾರ್ವಜನಿಕರ ಪ್ರಮುಖ ಬೇಡಿಕೆಯೂ ಹೌದು.

ಈ ಕಾಮಗಾರಿಯನ್ನು ದಿನದಲ್ಲಿ ಮೂರು ಪಾಳಿಯಂತೆ ಕಾರ್ಯ ನಿರ್ವಹಿಸಿ ತ್ವರಿತ ಗತಿಯಲ್ಲಿ ಮುಕ್ತಾಯಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ಸಚಿವೆ ಶೋಭಾ ಕರಂದ್ಲಾಜೆ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ ಅಂಬಲಪಾಡಿಯಲ್ಲಿ ಸಹ 22 ಕೋಟಿ ವೆಚ್ಚದಲ್ಲಿ ಓವರ್‌ ಪಾಸ್‌ ನಿರ್ಮಾಣ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದು, ಸಂತೆಕಟ್ಟೆಯಲ್ಲಿ ಕಾಮಗಾರಿ ಮುಕ್ತಾಯವಾಗುವವರೆಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್‌ ಇಲಾಖೆ ಮತ್ತು ರಾಷ್ಟೀಯ ಹೆದ್ದಾರಿಯ ಅಧಿಕಾರಿಗಳಿಗೆ ತಿಳಿಸಿದರು.

ಇದನ್ನೂ ಓದಿ : MLA Election 2023 Siddaramaiah : ಸಿದ್ದರಾಮಯ್ಯಗೆ ಸೂಚನೆ ಕೊಟ್ಟ ಮನೆ ದೇವರು : 2 ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ದೈವವಾಣಿ

ಇದನ್ನೂ ಓದಿ : Union Minister Sharath Yadav: ಮಾಜಿ ಕೇಂದ್ರ ಸಚಿವ ಶರದ್‌ ಯಾದವ್‌ ವಿಧಿವಶ

ಕಾರ್ಯಕ್ರಮದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ರಘುಪತಿ ಭಟ್‌, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್‌ ನಾಯಕ್‌, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಚ ಮನೋಹರ್‌ ಕಲ್ಮಾಡಿ ಹಾಗೂ ಇನ್ನೂ ಕಲವು ಅಧಿಕಾರಿಗಳು ಭಾಗಿಯಾಗಿದ್ದರು.

national highway santhekatte : Foundation stone for construction of overpass at Santhekatte: Union Minister Shobha Karandlaje

Comments are closed.