ಮಂಗಳೂರು : Dakshina Kannada district : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಲು ಸಾಲು ಕೊಲೆ ಪ್ರಕರಣಗಳು ವರದಿಯಾಗಿರುವುದು ಸಂಪೂರ್ಣ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ. ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತೊಂದು ಅಹಿತಕರ ಘಟನೆ ಸಂಭವಿಸಿದಂತೆ ಇನ್ನಿಲ್ಲದ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸಿರುವ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ.

ಮಂಗಳೂರು ಹೊರ ವಲಯದ ಬಜಪೆ ಹಾಗೂ ಸುರತ್ಕಲ್ ಪ್ರದೇಶಗಳಿಗೆ ಭೇಟಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್ ಸಾರ್ವಜನಿಕರು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಭದ್ರತೆಯ ಕುರಿತು ಪರಿಶೀಲನಾ ಸಭೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ನಿಯಮ ಜಾರಿಗೆ ತಂದಿದ್ದಾರೆ.

ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂಬದಿ ಸವಾರರಿಗೆ ಬೈಕ್ನಲ್ಲಿ ಕುಳಿತುಕೊಳ್ಳಲು ಅವಕಾಶ ಇರೋದಿಲ್ಲ. ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಹಾಗೂ ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ. ಹಿಂಬದಿ ಸವಾರರಿಂದ ದುಷ್ಕೃತ್ಯಗಳು ನಡೆಯುತ್ತಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಒಂದು ವಾರಗಳ ಕಾಲ ಜಿಲ್ಲೆಯಲ್ಲಿ ಈ ನಿಯಮ ಅನುಷ್ಠಾನಕ್ಕೆ ಬರಲಿದೆ. ಈ ಹಿಂದೆ ಬೇರೆ ರಾಜ್ಯಗಳಲ್ಲಿಯೂ ಶಾಂತಿ ಸುವ್ಯವಸ್ಥೆ ಕಾಪಾಡಲು ಈ ರೀತಿಯ ನಿಯಮವನ್ನು ಜಾರಿಗೆ ತರಲಾಗಿತ್ತು. ಈ ಮೂಲಕ ಜಿಲ್ಲೆಯಲ್ಲಿ ಕೊಲೆ ಪ್ರಮಾಣವನ್ನು ಕಡಿಮೆ ಮಾಡಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ : man killed for bar bill : ಬಾರ್ನಲ್ಲಿ ಬಿಲ್ ಪಾವತಿ ಮಾಡುವ ವಿಚಾರಕ್ಕೆ ಜಗಳ : ಮಧ್ಯಸ್ಥಿಕೆ ವಹಿಸಿದವನ ಬರ್ಬರ ಕೊಲೆ
New rules have been implemented in Dakshina Kannada district to maintain peace and order